ಬುಧವಾರ, ಸೆಪ್ಟೆಂಬರ್ 29, 2021
20 °C

ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ: ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ ಭೂ ದಾಖಲೆಗಳ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.

ಕಾರ್ಯ ವಿಳಂಬ ಹಾಗೂ ಭ್ರಷ್ಟಾಚಾರದ ದೂರುಗಳನ್ನು ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು, ವಿಭಾಗಾವಾರು ಕಡತಗಳನ್ನು ಪರಿಶೀಲಿಸಿದರು. ಕಾರ್ಯ ವಿಳಂಬಕ್ಕೆ ಕಾರಣಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಎಸಿಬಿ ಡಿವೈಎಸ್‌ಪಿ ವಿಜಯಕುಮಾರ್‌ ನೇತೃತ್ವದಲ್ಲಿ ಪ್ರದೀಪ್‌ ತಳಕೇರಿ, ವಿಕ್ರಮಸಿಂಗ್‌, ಬಸವರಾಜೇಶ್ವರಿ, ವಿನೋದರಾಜ, ಅಶೋಕ ಹಾಗೂ ರಾಜಪ್ಪ ಅವರು ದಾಳಿ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.