ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಆಕಸ್ಮಿಕ ಬೆಂಕಿ: ಎತ್ತು ಸಾವು

Published 19 ಫೆಬ್ರುವರಿ 2024, 16:02 IST
Last Updated 19 ಫೆಬ್ರುವರಿ 2024, 16:02 IST
ಅಕ್ಷರ ಗಾತ್ರ

ರಾಯಚೂರು: ನಗರದ ಹೊವಲಯದ ಬೈಪಾಸ್ ರಸ್ತೆಯ ಹರ್ಷಿತಾ ಗಾರ್ಡನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಗೆ ದನದ ಕೊಟ್ಟಿಗೆಯಲ್ಲಿದ್ದ ಎತ್ತು ಸುಟ್ಟು ಕರಕಲಾಗಿದೆ.

ಸೋಮವಾರ ಬೆಳಿಗ್ಗೆ 7ಕ್ಕೆ ಹರ್ಷಿತಾ ಗಾರ್ಡನ್‌ನ ಕಾಂಪೌಂಡ್ ಬಳಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು ಆನಂತರ ಅಲ್ಲಿನ ಕಾರ್ಮಿಕರ ವಸತಿ ನಿಲಯ ಹಾಗೂ ಗೋದಾಮಿಗೂ ಬೆಂಕಿ ಹಬ್ಬಿತು. ಬೆಂಕಿಗೆ ಮನೆ ಭಸ್ಮವಾಗಿದೆ. 

ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲ. ನಷ್ಟದ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT