ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಭಕ್ತರ ವಿರುದ್ಧ ಕ್ರಮ ಸರಿಯಲ್ಲ: ಮಂತ್ರಾಲಯದ ಸುಬುಧೇಂದ್ರ ತೀರ್ಥರು

Published 2 ಜನವರಿ 2024, 16:06 IST
Last Updated 2 ಜನವರಿ 2024, 16:06 IST
ಅಕ್ಷರ ಗಾತ್ರ

ರಾಯಚೂರು: ‘ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಳೆಯ ಘಟನೆ ಮುಂದಿಟ್ಟುಕೊಂಡು ರಾಮಭಕ್ತರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿರುವುದು ಸರಿಯಲ್ಲ’ ಎಂದು ಮಂತ್ರಾಲಯದ ಸುಬುಧೇಂದ್ರ ತೀರ್ಥರು ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮರ್ಯಾದಾ ಪುರುಷೋತ್ತಮನ ಮಂದಿರ ನಿರ್ಮಾಣಕ್ಕೆ ಶ್ರಮಿಸಿದ ಭಕ್ತರ ವಿರುದ್ಧ ಕ್ರಮ ಸರಿಯಲ್ಲ. ರಾಮಮಂದಿರ ನಿರ್ಮಾಣಕ್ಕೆ ಅನೇಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ದೇಹದ ಅಂಗಾಂಗ ಕಳೆದುಕೊಂಡಿದ್ದಾರೆ. ಆರ್ಥಿಕ ತೊಂದರೆಗೆ ಒಳಗಾಗಿದ್ದಾರೆ. ಇದು ದೇಶ ದ್ರೋಹದ ಕೆಲಸವಲ್ಲ. ಆರಾಧ್ಯದೇವನ ಮಂದಿರ ನಿರ್ಮಾಣ ನಮ್ಮೆಲ್ಲರ ಹಕ್ಕು’ ಎಂದು ಪ್ರತಿಪಾದಿಸಿದರು.

‘ರಾಮನ ಹೋಲಿಕೆಯನ್ನು ಇನ್ನೊಬ್ಬರೊಂದಿಗೆ ಮಾಡಬಾರದು. ಸಿದ್ದರಾಮಯ್ಯ ಅವರು ರಾಮನ ಹೆಸರು ಇಟ್ಟುಕೊಂಡಿದ್ದಾರೆ. ಅವರೂ ಆದರ್ಶ, ಜನಾನುರಾಗ ಪಡೆದುಕೊಂಡರೆ ಅವರನ್ನು ಅಭಿನಂದಿಸೋಣ’ ಎಂದು ಸ್ವಾಮೀಜಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT