ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಕೃಷ್ಣಾ ನದಿಗೆ 1 ಟಿಎಂಸಿ ನೀರು ಹರಿಸಲು ಕ್ರಮ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿಕೆ
Published 12 ಏಪ್ರಿಲ್ 2024, 13:52 IST
Last Updated 12 ಏಪ್ರಿಲ್ 2024, 13:52 IST
ಅಕ್ಷರ ಗಾತ್ರ

ರಾಯಚೂರು: ಕುಡಿಯುವ ನೀರಿಗಾಗಿ ಕೃಷ್ಣಾ ನದಿಗೆ ನಾರಾಯಣಪುರ ಜಲಾಶಯದಿಂದ 1 ಟಿಎಂಸಿ ನೀರು ಬಿಡುಗಡೆ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ತಿಳಿಸಿದ್ದಾರೆ.

ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಅವಶ್ಯಕತೆ ಇದೆ. ಕುಡಿಯುವ ನೀರಿಗಾಗಿ ತುಂಗಭದ್ರಾ ಜಲಾಶಯದಿಂದ ಕಾಲುವೆ ಮೂಲಕ ನೀರು ಹರಿಸಿ ಶೇ 80 ರಷ್ಟು ಕೆರೆಗಳನ್ನು ಭರ್ತಿ ಮಾಡಲಾಗಿದೆ. ಶೇ 20 ರಷ್ಟು ಕೆರೆಗಳು ಶೇ 50 ರಷ್ಟು ತುಂಬಿವೆ ಎಂದು ಹೇಳಿದ್ದಾರೆ.

ತುಂಗಭದ್ರಾ ಮತ್ತು ಕೃಷ್ಣಾ ನದಿ ನೀರಿನ ಮೇಲೆ ಅವಲಂಬಿತವಾಗದ ಹಳ್ಳಿಗಳಲ್ಲಿ ಬೋರ್‌ವೆಲ್ ಮೂಲಕ ನೀರು ಸರಬರಾಜು ಮಾಡುತ್ತಿದೆ. ಹೊಸ ಬೋರ್‌ವೆಲ್‌ಗಳ ಅವಶ್ಯಕತೆ ಇದ್ದಲ್ಲಿ ಕೊರೆಸಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಪ್ರಸ್ತಾವ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT