ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂದಾಖಲೆ ಅಪ್‌ಲೋಡ್‌ಗೆ ಮುುತುವರ್ಜಿ ವಹಿಸಿ

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಎಡಿಸಿ ಸಲಹೆ
Last Updated 11 ಫೆಬ್ರುವರಿ 2021, 16:09 IST
ಅಕ್ಷರ ಗಾತ್ರ

ರಾಯಚೂರು: ಭೂಮಿಗೆ ಸಂಬಂಧಿಸಿದ ಸರ್ವೆ ದಾಖಲೆ, ಭೂ ಒಡೆತನ ದಾಖಲೆ ಹಾಗೂ ಭೂಮಿಯಲ್ಲಿ ಬೆಳೆದ ಬೆಳೆಯ ವಿವರ ಹಾಗೂ ದಾಖಲಾತಿಗಳನ್ನು ಅಂತರ್ಜಲದಲ್ಲಿ ಅಪ್‌ಲೋಡ್ ಮಾಡುವ ಸಂದರ್ಭದಲ್ಲಿ ಮೂತುವರ್ಜಿ ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್‌.ದುರುಗೇಶ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 11ನೇ ಕೃಷಿ ಗಣತಿ ಕಾರ್ಯಕ್ರಮದಡಿ 2020-21ನೇ ಸಾಲಿನ ವರ್ಷವನ್ನು ಭೂ ದಾಖಲಾತಿ ವರ್ಷವೆಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಹಾಗೂ ಭೂ ಮಾಪನ ಇಲಾಖೆ, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಗಮನ ಹರಿಸಬೇಕು ಎಂದರು.

ಭೂ ನ್ಯಾಯ ಮಂಡಳಿ ವಿಷಯಗಳನ್ನು ಇತ್ಯರ್ಥ ಪಡಿಸಲು ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆನಡೆಸಿ ಪರಿಹಾರ ನೀಡಲಾಗುತ್ತದೆ. ಭೂ ದಾಖಲೆಗಳನ್ನು ಭೂ ಪರಿವರ್ತನೆ, ಮಂಜೂರಾತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕಾಳಜಿ ವಹಿಸಿ ಪರಿಶೀಲಿಸಬೇಕು ಎಂದರು.

ದೇಶದ ಆಹಾರ ಅಗತ್ಯತೆಯನ್ನು ಪೂರೈಸಲು ಸರ್ಕಾರವು ಕೃಷಿ ಅಭಿವೃದ್ದಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಈ ನಿಟ್ಟಿನಲ್ಲಿ 2020-21ನೇವರ್ಷವನ್ನು ಭೂ ದಾಖಲಾತಿ ವರ್ಷ ಎಂದು ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ ಎಂದು ಹೇಳಿದರು.

ಭೂ ದಾಖಲಾತಿಗೆ ಸಂಬಂಧಿಸಿ ಅಧಿಕಾರಿಗಳು ಪಾರದರ್ಶಕವಾಗಿ ಸರ್ವೆ ಮಾಡಿ ವರದಿ ನೀಡಬೇಕು. ಭೂ ದಾಖಲೆಗಳಾದ ಬಗರಹುಕುಂ, ಭೂ ಸ್ವಾಧೀನ, ದಾಖಲೆ ತಿದ್ದುಪಡಿ ಹಾಗೂ ವಸತಿ ಶಾಲೆಗಳಿಗೆ ಸರ್ಕಾರ ಭೂಮಿ ಮಂಜೂರು ಮಾಡುವ ವೇಳೆಅಧಿಕಾರಿಗಳು ಮುತುವರ್ಜಿ ವಹಿಸಿ ಸಮೀಕ್ಷೆ ಮಾಡಬೇಕು. ಭೂಮಿ ಸರ್ವೆ ಮಾಡಿದ ನಂತರ ಕಂಪ್ಯೂಟರ್‌ನಲ್ಲಿ ಅಪ್‌ಡೇಟ್ ಮಾಮಾಡುವ ಸಂದರ್ಭದಲ್ಲಿ ಎಲ್ಲಾ ದಾಖಲೆಗಳನ್ನು ಕುಲಂಕಷವಾಗಿ ಪರಿಶೀಲಿಸಿ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿಗಳಾದ ಸಂತೋಷ್ ಕಾಮಗೌಡ, ರಾಜಶೇಖರ್ ಡಂಬಾಳ್, ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT