ಲಿಂಗಸುಗೂರು: ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಘಟಕದ ನಿರ್ವಾಹಕ ಬಸಪ್ಪ ಅವರ ಮಗ ಆನಂದಕುಮಾರ ಭಾರತೀಯ ಅರಣ್ಯ ಸೇವೆ (ಐಎಫ್ಎಸ್)ಗೆ ಆಯ್ಕೆಯಾಗಿದ್ದಕ್ಕೆ ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಸನ್ಮಾನಿಸಿ ₹1 ಲಕ್ಷ ಪ್ರೋತ್ಸಾಹ ಧನ ನೀಡಿ ಅಭಿನಂದಿಸಿದರು.

‘ಕೆಕೆಆರ್ಟಿಸಿಯ ನಿರ್ವಾಹಕನ ಮಗ ಆನಂದಕುಮಾರ ಭಾರತೀಯ ಅರಣ್ಯ ಸೇವೆ (ಐಎಸ್ಎಫ್) ಪರೀಕ್ಷೆಯಲ್ಲಿ 41ನೇ ರ್ಯಾಂಕ್ ಪಡೆದು ಕುಟುಂಬಕ್ಕೂ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೂ ಕೀರ್ತಿ ತಂದಿರುತ್ತಾರೆ. ಸಾರಿಗೆ ಸಿಬ್ಬಂದಿ ಮಕ್ಕಳಿಗೆ ಸಾರಿಗೆ ವಿದ್ಯಾ ಚೇತನ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ಐದರಿಂದ ಹತ್ತು ಪಟ್ಟು ಹೆಚ್ಚಳ ಮಾಡಿ ಪ್ರೋತ್ಸಾಹಿಸಲಾಗುತ್ತಿದೆ’ ಎಂದು ಸಚಿವರು ಹೇಳಿದರು.

‘ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸುವಂತಾಗಲಿ’ ಎಂದರು.

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ರಾಯಚೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ ಎಂ.ಎಸ್., ಆನಂದಕುಮಾರ ಕುಟಂಬಸ್ಥರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.