ರಾಯಚೂರು: ಕೃಷ್ಣಾನದಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ನಾರಾಯಣಪುರ ಜಲಾಶಯದಿಂದ ಮಂಗಳವಾರದಿಂದ 1.2 ಲಕ್ಷ ಕ್ಯುಸೆಕ್ ನೀರು ಹರಿಬಿಡಲಾಗುತ್ತಿದೆ.
ಪ್ರವಾಹವು ಮತ್ತಷ್ಟು ಏರಿಕೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲ್ಲೂಕುಗಳ ನದಿಪಾತ್ರ ದ ಗ್ರಾಮಗಳಲ್ಲಿ ಪ್ರವಾಹ ಮುನ್ನಚ್ಚರಿಕೆ ನೀಡಲಾಗುತ್ತಿದೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಪ್ರವಾಹ ನಿರ್ವಹಣಾ ತಂಡಗಳಿಗೆ ಆಯಾ ತಾಲ್ಲೂಕುಗಳ ತಹಶೀಲ್ದಾರರು ಸನ್ನದ್ಧರಾಗಿರುವಂತೆ ಸೂಚನೆ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.