ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಮಾರ್ಗದರ್ಶಿಯಾದ ಕೃಷಿ ಇಲಾಖೆ ಮಾದರಿ

Last Updated 15 ಡಿಸೆಂಬರ್ 2019, 13:12 IST
ಅಕ್ಷರ ಗಾತ್ರ

ರಾಯಚೂರು: ಕೃಷಿ ಮೇಳದಲ್ಲಿ ಕೃಷಿ ಇಲಾಖೆಯಿಂದ ನಿರ್ಮಾಣ ಮಾಡಿರುವ ‘ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಯುವಿಕೆ’ ಯೋಜನೆಯ ಮಾದರಿಯು ರೈತರಿಗೆ ಒಳ್ಳೆಯ ಮಾಹಿತಿ ಒದಗಿಸುವಂತಿದೆ.

ಮಳೆನೀರನ್ನು ಸಂರಕ್ಷಣೆ ಮಾಡಿಕೊಂಡು ಸುಸ್ಥಿರ ಕೃಷಿ ಮಾಡುವ ವಿಧಾನವನ್ನು ಕಲಾಕೃತಿ ರೂಪದಲ್ಲಿ ನೋಡುವುದಕ್ಕೆ ವ್ಯವಸ್ಥೆ ಮಾಡಿರುವುದು ವಿಶೇಷವಾಗಿತ್ತು. ರೈತರು, ವಿದ್ಯಾರ್ಥಿಗಳು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ. ಗುಡ್ಡ ಬೆಟ್ಟಗಳಿಂದ ಹರಿದು ಬರುವ ಮಳೆ ನೀರನ್ನು ಹಾಗೂ ಅದರೊಂದಿಗೆ ಬರುವ ಮಣ್ಣನ್ನು ಸಂರಕ್ಷಿಸುವ ವಿಧಾನವು ನೋಡಿದರೆ ಮನವರಿಕೆ ಆಗುವಂತೆ ಮಾಡಲಾಗಿದೆ.

ಚೆಕ್‌ಡ್ಯಾಂ ನಿರ್ಮಾಣ ಮಾಡುವುದು, ನಾಲಾ ಬದುಗಳನ್ನು ನಿರ್ಮಿಸುವುದು, ಕೃಷಿ ಹೊಂಡ ಮಾಡುವುದರಿಂದ ನೀರನ್ನು ಸಂರಕ್ಷಿಸುವ ವಿಧಾನವನ್ನು ತೋರಿಸಲಾಗಿದೆ. ಮಳೆಯಾಶ್ರಿತ ಪ್ರದೇಶದ ರೈತರ ಆದಾಯವನ್ನು ಹೆಚ್ಚಿಸಲು, ಜಲಾನಯನ ಪ್ರದೇಶಗಳಲ್ಲಿ ಸ್ವಾಭಾವಿಕ ಸಂಪನ್ಮೂಲಗಳನ್ನು ನಿರ್ವಹಿಸುವ ಬಗೆ ಅದರಲ್ಲಿದೆ.

ನೈಸರ್ಗಿಕ ಸಂಪನ್ಮೂಲಗಳನ್ನು ಉತ್ತಮವಾಗಿ ನಿರ್ವಹಿಸಿ ಕೃಷಿ ಭೂಮಿಯ ಫಲವತ್ತತೆ ಹಾಗೂ ಅದರ ಉತ್ಪನ್ನ ಶಕ್ತಿಯನ್ನು ಹೆಚ್ಚಿಸುವುದು. ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿಯನ್ನು ಕೃಷಿ ಯೋಗ್ಯ ಭೂಮಿಯಾಗಿ ಪರಿವರ್ತಿಸುವುದು. ಕೃಷಿ ಭೂಮಿಯ ಫಲವತ್ತತೆ ಹೆಚ್ಚಿಸುವುದು. ಉತ್ಪಾದನೆ ಹೆಚ್ಚಿಸುವುದು. ನೈಸರ್ಗಿಕ ಸಂಪನ್ಮೂಲಗಳ ಸುಧಾರಣೆ ಮಾಡುವುದು ಈ ಯೋಜನೆಯ ಉದ್ದೇಶ ಎಂಬುದನ್ನು ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ವಿವರಿಸುತ್ತಿರುವುದು ಕಂಡುಬಂತು.

‘ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಈ ಎಲ್ಲ ಕಾಮಗಾರಿಗಳನ್ನು ಮಾಡಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಮಾರ್ಗದರ್ಶಿ ಸೂತ್ರಗಳು ಬರುತ್ತಿವೆ. ಇದಲ್ಲದೆ ರಾಜ್ಯದ 100 ತಾಲ್ಲೂಕುಗಳನ್ನು ಜಲಾನಯನ ಯೋಜನೆಗೆ ಆಯ್ಕೆ ಮಾಡಿದ್ದಾರೆ. ಅದರಲ್ಲಿ ರಾಯಚೂರು ಜಿಲ್ಲೆಯ ನಾಲ್ಕು ತಾಲ್ಲೂಕುಗಳು ಪಟ್ಟಿಯಲ್ಲಿವೆ. ಇದಕ್ಕಾಗಿ ಅನುದಾನ ಒದಗಿಸುವ ಬಗ್ಗೆ ಸರ್ಕಾರ ತಿಳಿಸಿಲ್ಲ’ ಎಂದು ಕೃಷಿ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಸಂದೀಪ ನಾಯಕ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT