ಬುಧವಾರ, ಜುಲೈ 28, 2021
29 °C

ರಾಯಚೂರಿನ ಕೃಷಿ ಜಮೀನುಗಳಿಗೆ ವಿಜ್ಞಾನಿಗಳ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ತಾಲ್ಲೂಕಿನ ಮಂಡಲಗೇರಾ ಗ್ರಾಮದ ಮಲ್ಲೇಶ,ಡಿ. ವೆಂಕಣ್ಣ ಹಾಗೂ ಮಲ್ಲಣ್ಣಗೌಡ ರೈತರ ಜಮೀನುಗಳಿಗೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಜಿ.ಎಸ್.ಯಡಹಳ್ಳಿ, ಕೀಟಶಾಸ್ತ್ರ ವಿಜ್ಞಾನಿ ಡಾ.ಶ್ರೀವಾಣಿ ಜಿ.ಎನ್. ಅವರು ಮಂಗಳವಾರ ಭೇಟಿ ನೀಡಿದರು.

ಹತ್ತಿ ಬಿತ್ತನೆಯಾಗಿದ್ದು, ಮೆಣಸಿನಕಾಯಿ, ಟೊಮ್ಯಾಟೊ ಬೆಳೆಗಳು ಸಸಿಮಡಿ ಹಂತದಲ್ಲಿದ್ದವು. ಹತ್ತಿ ಬೆಳೆಗೆ ರಸ ಹೀರುವ ಕೀಟಗಳ ಬಾಧೆ ಕಂಡು ಬಂದಿದ್ದು, ಮೆಣಸಿನಕಾಯಿ ಹಾಗೂ ಟೊಮ್ಯಾಟೊ ಬೆಳೆಗಳಿಗೆ ಎಲೆಚುಕ್ಕೆ ರೋಗಗಳ ಬಾಧೆ ಕಂಡು ಬಂದಿದ್ದು, ಅದಕ್ಕೆ ಸೂಕ್ತ ಸಲಹೆಗಳನ್ನು ನೀಡಲಾಯಿತು.

ಡಿ.ಬಿ.ಟಿ. ಪ್ರಾಯೋಜಿತ ಕಿಸಾನ್ ಬಯೋಟೆಕ್ ಯೋಜನೆಯ ಅಡಿ ಹತ್ತಿಯಲ್ಲಿ ಸಮಗ್ರ ಬೆಳೆ ಹಾಗೂ ನೀರು ನಿರ್ವಹಣೆ (ಹನಿ ನೀರಾವರಿ)ಯ ಕುರಿತು ವೈಜ್ಞಾನಿಕ ಮಾಹಿತಿಯನ್ನು ನೀಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು