ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲ್ಯಾಪ್‌ಟಾಪ್ ನೀಡಲು ಎಐಡಿಎಸ್ಓ ಒತ್ತಾಯ

Last Updated 19 ಫೆಬ್ರುವರಿ 2020, 20:15 IST
ಅಕ್ಷರ ಗಾತ್ರ

ರಾಯಚೂರು:ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ವಿಳಂಬ ಮಾಡಿದನ್ನು ಖಂಡಿಸಿ ಎಐಡಿಎಸ್ಓದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿ, ರಾಜ್ಯ ಸರ್ಕಾರ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿಎಸ್ಇ ಹಾಗು ಬಿಸಿಎ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಘೋಷಣೆಯಂತೆ 2019–20ನೇ ಸಾಲಿನ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್‌ಟಾಪ್ ವಿತರಿಸಿ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿತರಿಸದೇ ನಿರ್ಲಕ್ಷ್ಯ ವಹಿಸಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪದವಿಯ ತೃತೀಯ ವರ್ಷದ ವಿದ್ಯಾರ್ಥಿಗಳು ಇನ್ನೂ ಮೂರು ತಿಂಗಳಲ್ಲಿ ಹೊರಹೋಗುತ್ತಿದ್ದು ಈವರೆಗೆ ಲ್ಯಾಪ್ ಟಾಪ್ ನೀಡಿಲ್ಲ. ಅಲ್ಲದೇ ಪ್ರಥಮ ವರ್ಷದ ಕೆಲವರಿಗೆ ಮಾತ್ರ ನೀಡಿ ಬಹುತೇಕರಿಗೆ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳಲ್ಲಿ ಒಡಕು ಮೂಡುವಂತಾಗಿದೆ. ಸರ್ಕಾರ ಯೋಜನೆ ರೂಪಿಸಬೆಕಾದರೆ ಎಲ್ಲರನ್ನು ಒಳಗೊಳ್ಳಬೇಕಾಗಿತ್ತು ಎಂದರು.

2016ನೇ ಸಾಲಿನ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿ ಈಗ ಮತ್ತೆ ಲ್ಯಾಪ್ ಟಾಪ್ ಭರವಸೆ ನೀಡಿದೆ. ಹಾಗಾದರೆ ಎರಡು ವರ್ಷಗಳಿಂದ ಲ್ಯಾಪ್ ಟಾಪ್ ಖರೀದಿಗೆ ಮೀಸಲಿಟ್ಟ ಹಣ ಏನಾಗಿದೆ ಎಂದು ಪ್ರಶ್ನಿಸಿದರು.

ಉಚಿತ ಲ್ಯಾಪ್ ಟಾಪ್ ನೀಡುವುದರಿಂದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಲಿದ್ದು ಕೂಡಲೇ ದ್ವಿತೀಯ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಬೇಕು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ್ ಚೀಕಲಪರ್ವಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT