ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಮ್ಸ್‌: ಶೀಘ್ರ ರಾಯಚೂರಿಗೆ ಅಧ್ಯಯನ ತಂಡ

Published 9 ಫೆಬ್ರುವರಿ 2024, 16:29 IST
Last Updated 9 ಫೆಬ್ರುವರಿ 2024, 16:29 IST
ಅಕ್ಷರ ಗಾತ್ರ

ರಾಯಚೂರು: ‘ಕೇಂದ್ರ ಆರೋಗ್ಯ ಇಲಾಖೆಯ ತಂಡವನ್ನು ರಾಯಚೂರಿಗೆ ಕಳಿಸಿ ತಂಡದ ವರದಿ ಆಧರಿಸಿ ಏಮ್ಸ್‌ ಮಂಜೂರು ಮಾಡುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಕ್ ಮಾಂಡವಿಯಾ ಭರವಸೆ ನೀಡಿದ್ದಾರೆ.

ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಹಾಗೂ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಕೇಂದ್ರ ಸಚಿವರಿಗೆ ಭೇಟಿಯಾಗಿ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ಮನವಿ ಮಾಡಿಕೊಂಡ ಸಂದರ್ಭದಲ್ಲಿ ಅಧ್ಯಯನ ತಂಡ ಕಳಿಸುವ ಭರವಸೆ ನೀಡಿದ್ದಾರೆ.

ರಾಯಚೂರು ಅತ್ಯಂತ ಹಿಂದುಳಿದ ಜಿಲ್ಲೆಯಾಗಿದೆ. ಕೇಂದ್ರ ಸರ್ಕಾರವೇ ಮಹಾತ್ವಾಕಾಂಕ್ಷಿ ಜಿಲ್ಲೆ ಎಂದು ಘೋಷಣೆ ಮಾಡಿದೆ. ಇಲ್ಲಿ ಏಮ್ಸ್ ಸ್ಥಾಪನೆಗೆ ಅಗತ್ಯವಿರುವ ಮೂಲಸೌಕರ್ಯಗಳು ಲಭ್ಯವಿದೆ. ಏಮ್ಸ್ ಹೋರಾಟ ಸಮಿತಿಯು 638 ದಿನಗಳಿಂದ ಧರಣಿ ನಡೆಸಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಪ್ಪಿ ಪತ್ರ ಬರೆದಿದ್ದಾರೆ ಎಂದು ಉಭಯ ಸಂಸದರು ಸಚಿವರಿಗೆ ಮನವರಿಕೆ ಮಾಡಿದರು ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT