ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣದ ಭೂ ಗಡಿ ಗುರುತು ಶೀಘ್ರ: ಭಾವನಾ

ಭೂ ದಾಖಲೆಗಳ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕಿ ಭಾವನಾ
Last Updated 30 ಆಗಸ್ಟ್ 2021, 16:20 IST
ಅಕ್ಷರ ಗಾತ್ರ

ರಾಯಚೂರು: ಯರಮರಸ್‌ನಲ್ಲಿ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸಂಬಂಧಪಟ್ಟ ಭೂದಾಖಲೆ ಪ್ರಕಾರ ಜಮೀನುಗಳನ್ನು ಸರ್ವೆ ಮಾಡಿ ನಂತರ ಅಲ್ಲಿ ಗಡಿ ನಿರ್ಮಾಣ ಮಾಡಲಾಗುತ್ತದೆ ಎಂದು ಭೂ ದಾಖಲೆಗಳ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕಿ ಭಾವನಾ ಬಸವರಾಜ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ನಗರದ ಹೊರವಲಯದ ಯರಮರಸ್ ಗ್ರಾಮದ ಹತ್ತಿರ ವಿ.ಐ.ಪಿ ಸರ್ಕಿಟ್‌ ಹೌಸ್‌ನಲ್ಲಿ ಏರ್‌ಸ್ಟ್ರಿಪ್‌ ನಿರ್ಮಾಣ ಸಂಬಂಧ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದರು.

402 ಎಕರೆಯಲ್ಲಿ ವಿಮಾನ ನಿಲ್ದಾಣಕ್ಕೆ ಬೇಕಾದ ಭೂ ಗಡಿಗಳನ್ನು ನಿರ್ಮಾಣ ಮಾಡಲು ಜಮೀನುಗಳ ಸರ್ವೆ ಪ್ರಕಾರ ಪರಿಶೀಲನೆ ಮಾಡಬೇಕಾಗುತ್ತದೆ. ಕಡ್ಡಾಯವಾಗಿ ಜಮೀನುಗಳ ನಕ್ಷೆಯ ಪ್ರಕಾರ ಸರ್ವೆ ಮಾಡಿದ ನಂತರ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.

ರಾಯಚೂರು ತಾಲ್ಲೂಕು ತಹಶೀಲ್ದಾರ್ ಡಾ.ಹಂಪಣ್ಣ, ನಗರಸಭೆ ಪೌರಯುಕ್ತ ವೆಂಕಟೇಶ್, ಲೋಕೋಪಯೋಗಿ ಇಲಾಖೆ,ಜಂಟಿ ನಿರ್ದೇಶಕರು, ಕೈಗಾರಿಕಾ ಇಲಾಖೆ, ಹಿರಿಯ ಭೂ ವಿಜ್ಞಾನಿಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಾರ್ಯನಿರ್ವಾಹಕ ಎಂಜಿನಿಯರುಗಳು, ಪ್ರಧಾನ ಮಂತ್ರಿ ಗ್ರಾಮೀಣ ರಸ್ತೆ ಯೋಜನಾ ಘಟಕ ಕಾರ್ಯನಿರ್ವಾಹಕ ಎಂಜಿನಿಯರುಗಳು ಹಾಗೂ ಜೆಸ್ಕಾಂ ಎಂಜಿನಿಯರುಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT