ಶನಿವಾರ, ಸೆಪ್ಟೆಂಬರ್ 18, 2021
28 °C

ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ: ಎಎಐ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

dh file

ರಾಯಚೂರು: ನಗರದ ಹೊರವಲಯದ ಯರಮರಸ್‌ನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದಕ್ಕೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಒಪ್ಪಿಗೆ ನೀಡಿದೆ.

ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದು ತಾಂತ್ರಿಕವಾಗಿ ಸಾಧ್ಯತೆ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸುವಂತೆ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ)ದ ಮೂಲಕ ಕೋರಲಾಗಿತ್ತು.

ಎಎಐ ತಂತ್ರಜ್ಞರ ತಂಡವು ಈ ಮೊದಲೇ ರಾಯಚೂರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿಕೊಂಡು ಹೋಗಿತ್ತು.

ವಿಮಾನ ನಿಲ್ದಾಣ ನಿರ್ಮಿಸುವುದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯಿಂದ ₹40 ಕೋಟಿ ಹಾಗೂ ಜಿಲ್ಲಾ ಗಣಿ ನಿಧಿ (ಡಿಎಂಎಫ್‌) ₹10 ಕೋಟಿಯನ್ನು ಮೀಸಲಿಡಲಾಗಿದೆ.

‘ಎಎಐನಿಂದ ತಾಂತ್ರಿಕ ಒಪ್ಪಿಗೆ ಪತ್ರ ಬಂದಿದೆ. ಕೆಎಸ್‌ಐಐಡಿಸಿ ಈಗಾಗಲೇ ಡಿಪಿಆರ್‌ ಮಾಡುವುದಕ್ಕೆ ಟೆಂಡರ್‌ ಪ್ರಕ್ರಿಯೆ ಮಾಡುತ್ತಿದೆ’ ಎಂದು ರಾಯಚೂರು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು