ಸಿಂಧನೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ₹15,000, ಸಹಾಯಕಿಯರಿಗೆ ₹10,000 ಗೌರವಧನ ಹೆಚ್ಚಿಸಿ ಜಾರಿಗೊಳಿಸಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ.2ರಂದು ಬೆಂಗಳೂರು ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಜಿಲ್ಲಾ ಕಾರ್ಯಾಧ್ಯಕ್ಷ ಸಂಗಯ್ಯ ಹಿರೇಮಠ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ 2011ರಿಂದ ನಿವೃತ್ತರಾಗಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ಹಾಗೂ ನಿವೃತ್ತಿ ಪಡೆದವರಿಗೂ ಗ್ರಾಚ್ಯುಟಿ ಅನುಕೂಲ ಕಲ್ಪಿಸಬೇಕು. ಬಿಎಲ್ಒ ಜವಾಬ್ದಾರಿ ನಿರಾಕರಿಸುವ ಕಾರ್ಯಕರ್ತೆಯರ ಶಿಸ್ತುಕ್ರಮ ಜರುಗಿಸುತ್ತಿರುವುದು ಸರಿಯಲ್ಲ’ ಎಂದು ಟೀಕಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಕ್ಯಾತ್ನಟ್ಟಿ ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಡಿ.ಎ ₹30 ಇರುವುದನ್ನು ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸಬೇಕು, ಇದನ್ನು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುವವರಿಗೂ ವಿಸ್ತರಿಸಬೇಕು’ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷೆ ಸುಲೋಚನಾ, ತಾಲ್ಲೂಕು ಘಟಕದ ಅಧ್ಯಕ್ಷೆ ಗಿರಿಜಮ್ಮ, ಪದಾಧಿಕಾರಿಗಳಾದ ಸಾವಿತ್ರಿ ಎಲೆಕೂಡ್ಲಿಗಿ, ತಿಪ್ಪಯ್ಯ ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.