ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಮಾಧಾನ ವ್ಯಕ್ತಪಡಿಸಿದ ದಲಿತ ಸಂಸದ

Last Updated 7 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದ ನಾಗಿನಾ ಲೋಕಸಭಾ ಕ್ಷೇತ್ರದ ದಲಿತ ಸಂಸದ ಯಶವಂತ್‌ ಸಿಂಗ್‌ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.  ಅಸಮಾಧಾನ ತೋಡಿಕೊಂಡ ದಲಿತ ಸಂಸದರ ಸಂಖ್ಯೆ ನಾಲ್ಕಕ್ಕೇರಿದೆ.

‘ಎನ್‌ಡಿಎ ಸರಕಾರವು ಈ ನಾಲ್ಕು ವರ್ಷಗಳ ಅವಧಿಯಲ್ಲಿ ದಲಿತರಿಗೆ ಏನೂ ಮಾಡಲಿಲ್ಲ. ಬಡ್ತಿಯಲ್ಲಿ ಮೀಸಲಾತಿ ನೀಡಬೇಕು ಎಂದು ಮೊದಲಿನಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಆದರೆ ಈ ನಾಲ್ಕು ವರ್ಷಗಳಲ್ಲಿ ಅದನ್ನು ಕಾರ್ಯಗತಗೊಳಿಸಿಲ್ಲ’ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಸಿಂಗ್‌ ಹೇಳಿದ್ದಾರೆ.

ದಲಿತ ಸಮುದಾಯದವರು ಸಾರ್ವಜನಿಕವಾಗಿ ಎತ್ತುವ ಪ್ರಶ್ನೆಗಳಿಗೆ ಉತ್ತರಿಸುವುದು ದಲಿತ ಪ್ರತಿನಿಧಿಗಳಿಗೆ ಬಹಳ ಕಷ್ಟವಾಗುತ್ತಿದೆ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸಂಸದ ಈಶ್ವರ್‌ ಅಶೋಕ್‌ ದೊಹ್ರೆ ಅವರು ಪ್ರಧಾನಿಗೆ ಪತ್ರ ಬರೆದು, ‘ಉತ್ತರಪ್ರದೇಶದಲ್ಲಿ ಭಾರತ್‌ ಬಂದ್‌ ನಡೆದ ನಂತರ ಯೋಗಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ದಲಿತರಿಗೆ ಕಿರುಕುಳ ನೀಡುತ್ತಿವೆ’ ಎಂದು ಈ ಮೊದಲು ಆರೋಪಿಸಿದ್ದರು.

ಉತ್ತರ ಪ್ರದೇಶದಲ್ಲಿ ಆದಿವಾಸಿಗಳ ಪ್ರಾಬಲ್ಯದ ಸೋನೆಭದ್ರಾ ಜಿಲ್ಲೆಯ ಸಂಸದ ಚೋಟೆಲಾಲ್‌ ಕಾರ್‌ವಾರ್‌ ಅವರು ಕೆಲ ದಿನಗಳ ಹಿಂದೆ ಮೋದಿ ಅವರಿಗೆ ಪತ್ರ ಬರೆದು, ಆದಿತ್ಯನಾಥ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಮಾತ್ರವಲ್ಲದೆ ಅಧಿಕಾರಿಗಳಿಂದಲೂ ತಾರತಮ್ಯಕ್ಕೊಳಗಾಗುತ್ತಿರುವುದಾಗಿ ತಿಳಿಸಿದ್ದರು. ಇದನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ಇದಕ್ಕೂ ಮೊದಲು ಬಹರೈಚ್‌ ಕ್ಷೇತ್ರದ ಸಂಸದೆ ಸಾವಿತ್ರಿ ಬಾಯಿ ಫುಲೆ ಕೂಡಾ ಇದೇ ಆರೋಪ ಮಾಡಿದ್ದರು. ಯೋಗಿ ಆದಿತ್ಯನಾಥ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಆರೋಪ ಮಾಡಿರುವ ಸಂಸದರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT