ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಹೆದ್ದಾರಿಗೆ ಭೂ ಸ್ವಾಧೀನದಲ್ಲಿ ನಿಯಮ ಉಲ್ಲಂಘನೆ: ಆರೋಪ

Published 15 ಡಿಸೆಂಬರ್ 2023, 15:18 IST
Last Updated 15 ಡಿಸೆಂಬರ್ 2023, 15:18 IST
ಅಕ್ಷರ ಗಾತ್ರ

ರಾಯಚೂರು: ‘ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅವೈಜ್ಞಾನಿಕವಾಗಿ ಜಮೀನು ಸ್ವಾಧೀನ ಪ್ರಕ್ರಿಯೆ ನಡೆಸಲಾಗಿದೆ. ಭೂ ಸಂತ್ರಸ್ತರಿಗೆ ಆಕ್ಷೇಪಣೆ ಆಲಿಸದೇ ಅನ್ಯಾಯ ಮಾಡಲಾಗಿದೆ ಎಂದು ‌ಆರೋಪಿಸಿ ಕಾನೂನು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಆರ್ಗನೈಜೇಶನ್ ರಾಜ್ಯ ಘಟಕದ ಅಧ್ಯಕ್ಷ ಶರಣಪ್ಪ ಉದ್ಬಾಳ ಎಚ್ಚರಿಸಿದರು.

‘ಭಾರತ ಮಾಲಾ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬೆಳಗಾವಿ– ರಾಯಚೂರು ರಾಷ್ಟ್ರೀಯ ಹೆದ್ದಾರಿ–748ಎ(ಎನ್‌ಎಚ್‌)ಗಾಗಿ ರೈತರಿಂದ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ‌‌‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕನಿಷ್ಠ ಕಾನೂನು ನಿಯಮಗಳನ್ನು ಪಾಲಿಸುತ್ತಿಲ್ಲ. ಜಮೀನಿಗೆ ಅತ್ಯಂತ ಕನಿಷ್ಠ ದರ ನಿಗದಿಪಡಿಸಿದೆ. ನಿಯಮ ಉಲ್ಲಂಘಿಸಿದ ಅಧಿಕಾರಿಗಳು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಸಂತ್ರಸ್ತರ ಆಕ್ಷೇಪಣೆಗೂ ಕಿವಿಕೊಡುತ್ತಿಲ್ಲ’ ಎಂದು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.

‘ಭೂ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಜಮೀನಿಗೆ ಅತ್ಯಂತ ಕಡಿಮೆ ಬೆಲೆ ನಿಗದಿ ಮಾಡಿ ಕೆಲವರಿಗೆ ಅವಾರ್ಡ್ ನೀಡುತ್ತಿರುವುದು ಖಂಡನೀಯ. ಶಾಸಕರು, ಸಂಸದರು, ಲಿಂಗಸುಗೂರು ಉಪವಿಭಾಗಾಧಿಕಾರಿ, ಜಿಲ್ಲಾಧಿಕಾರಿ, ಎನ್‌ಎಚ್‌ ಅಧಿಕಾರಿಗಳು ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಸೂಕ್ತ ನ್ಯಾಯ ಹಾಗೂ ಪರಿಹಾರ ಒದಗಿಸಲು ಕ್ರಮವಹಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಭೂಸಂತ್ರಸ್ತರಾದ ಸಿದ್ದಲಿಂಗಪ್ಪ ಸಾಹುಕಾರ, ಮಲ್ಲನಗೌಡ ಹಳ್ಳಿ, ಪಂಪಾಪತಿ ಹೊಸಗೌಡ್ರ ಗೋನವಾರ, ಶಿವರಾಜ ಎಂ ಗೋನವಾರ, ಮೌನೇಶ ಮಡಿವಾಳ ಗೋನವಾರ, ಮಲ್ಲನಗೌಡ ಅಂಚೆಸೂಗೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT