ಸೋಮವಾರ, ಫೆಬ್ರವರಿ 17, 2020
18 °C

ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಅವ್ಯವಹಾರ: ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್‌ಸಿಪಿ, ಎಸ್‌ಟಿಪಿ ಹಾಗೂ ವಿವಿಧ ಯೋಜನೆಯಡಿ ಅವ್ಯವಹಾರ ನಡೆದಿವೆ ಎಂದು ಆರೋಪಿಸಿರುವ ದಲಿತ ಸೇನೆ ಮಾನ್ವಿ ತಾಲ್ಲೂಕು ಘಟಕದ ಅಧ್ಯಕ್ಷ ಆಂಜನೇಯ ವಡ್ಡೇಪಲ್ಲಿ ಆರೋಪಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ವಿ ತಾಲ್ಲೂಕಿನ ಸಮಾಜ ಕಲ್ಯಾಣ ಅಧಿಕಾರಿ 2015-16 ಹಾಗೂ 2016-17 ರಲ್ಲಿ ಎಸ್‌ಸಿಪಿ, ಟಿಎಸ್‌ಪಿ ಅಡಿ ಸಿಸಿ ರಸ್ತೆ ಕಾಮಗಾರಿ ಮತ್ತು ಶೇ 24.10 ಅನುದಾನದಲ್ಲಿ ಶೈಕ್ಷಣಿಕ ಪ್ರವಾಸ ಮತ್ತು ಶೇ 22.75 ರಲ್ಲಿ ಹಾಸ್ಟೇಲ್‌ಗಳಿಗೆ ಟ್ರಂಕ್ ಖರೀದಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ದೂರಿದರು.

ಶೈಕ್ಷಣಿಕ ಪ್ರವಾಸ ಟೆಂಡರ್ ಕರೆಯದೆ ಬೋಗಸ್ ಬಿಲ್ ಸೃಷ್ಟಿಸಿ ಹಣ ಎತ್ತುವಳಿ ಮಾಡಿಕೊಂಡಿದ್ದಾರೆ. ಸ್ವಂತ ಕಾರನ್ನು ಇಲಾಖೆಗೆ ಬಾಡಿಗೆಗೆ ಕೊಟ್ಟು ಆಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದು, ಮಕ್ಕಳ ಹೆಸರಿನಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆ ಅಕ್ರಮ ಆಸ್ತಿ ಹೊಂದಿದ್ದಾರೆ. ಇಲಾಖೆಯ ಹಲವಾರು ಯೋಜನೆಗಳಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಜಿಲ್ಲಾಧಿಕಾರಿ ಈ ಕುರಿತು ತನಿಖೆ ನಡೆಸಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸೇವೆಯಿಂದ ನಿವೃತ್ತಗೊಳಿಸಬೇಕು ಎಂದು ಒತ್ತಾಯಿಸಿದರು.

ಹೊಳೆಯಪ್ಪ ಉಟಕನೂರು, ಹನುಮಂತರಾಯ ,ಶರಣಪ್ಪ ಸಿರವಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು