ಸೋಮವಾರ, ಜನವರಿ 17, 2022
18 °C

ಹಾಲಾಪುರ: ಜಂತುಹುಳು ನಿವಾರಣೆಗೆ ಮಾತ್ರೆ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಲಾಪುರ (ಕವಿತಾಳ): ‘ಜಂತುಹುಳು ಬಾಧೆಯಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ’ ಎಂದು ರಾಷ್ಟ್ರೀಯ ಬಾಲಸ್ವಾಸ್ಥ್ಯ ಯೋಜನೆಯ ವೈದ್ಯಾಧಿಕಾರಿ ಡಾ.ಶ್ರೀಧರ ಇಲ್ಲೂರು ಹೇಳಿದರು.

ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈಚೆಗೆ ನಡೆದ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಲ್ಬೆಂಡ್‌ಜೋಲ್‌ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜಂತುಹುಳು ನಿವಾರಣೆಗೆ ಪ್ರತಿ ಆರು ತಿಂಗಳಿಗೊಮ್ಮೆ ಅಲ್ಬೆಂಡ್‌ಜೋಲ್‌ ಮಾತ್ರೆಯನ್ನು ಮಕ್ಕಳಿಗೆ ಕಡ್ಡಾಯವಾಗಿ ನೀಡಬೇಕು. ಜಂತುಹುಳು ಬಾಧೆಯಿಂದ ರಕ್ತಹೀನತೆ ಉಂಟಾದಲ್ಲಿ ಮಕ್ಕಳಲ್ಲಿ ಕಲಿಕಾ ಉತ್ಸಾಹ ಕುಗ್ಗುತ್ತದೆ’ ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕರಿಯಪ್ಪ, ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು