ರಾಯಚೂರು: ಯುವನಿಧಿ ಯೋಜನೆಗೆ ಸೇವಾಸಿಂಧು ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಜನವರಿ 20ರವರೆಗೆ ರಾಯಚೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪವನ ಕಿಶೋರ ಪಾಟೀಲ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಜಿಲ್ಲೆಯ 8 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈಗಾಗಲೇ ಈ ಯೋಜನೆಯ ಲಾಭ ಪಡೆದಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಇತರರು ಯೋಜನೆಯ ಲಾಭ ಪಡೆಯಬೇಕು ಎಂದು ಹೇಳಿದರು.

ಪದವೀಧರರಿಗೆ ಪ್ರತಿ ತಿಂಗಳು ₹3,000 ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದವರಿಗೆ ₹1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ ಎಂದು ತಿಳಿಸಿದರು.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ನಂಬರ್ ಹೊಂದಿರಬೇಕು. ಅರ್ಜಿ ಸಲ್ಲಿಸಿದ ನಂತರ ಸೇವಾಸಿಂಧು ಪೋರ್ಟಲ್ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿ ಇದೆ ಎಂಬುದನ್ನು ಪರಿಶೀಲಿಸಿ ಒಂದು ವೇಳೆ ಅರ್ಜಿಯ ನೋಂದಾಣಿಯಾಗದಿದ್ದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ನವೀನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ವೆಂಕಣ್ಣ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ವೆಂಕಟೇಶ ನಾಯಕ, ರಾಧಾಕೃಷ್ಣ ರೆಡ್ಡಿ, ವೀರೇಶ ಗಾಣದಾಳ, ಶಶಿಕಲಾ, ಭಾರತಿ, ಮೊಹಮ್ಮದ್ ಜಾವೀದ್, ರಾಘವೇಂದ್ರ ಹಾಗೂ ತಿಮ್ಮಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.