ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನ್ವಿ | ಅಂಬೇಡ್ಕರ್ ಪ್ರತಿಮೆಗೆ ಅವಮಾನ: ಕ್ರಮಕ್ಕೆ ಒತ್ತಾಯ

Published 10 ಜನವರಿ 2024, 14:58 IST
Last Updated 10 ಜನವರಿ 2024, 14:58 IST
ಅಕ್ಷರ ಗಾತ್ರ

ಮಾನ್ವಿ: ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಘಟನೆ ಖಂಡಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ತಾಲ್ಲೂಕು ಘಟಕದ ಸದಸ್ಯರು ಬುಧವಾರ ತಹಶೀಲ್ದಾರ್ ಅಬ್ದುಲ್‌ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ನ್ಯಾಯಾಲಯದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದವರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಯಿತು.

ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ ಜಾನೇಕಲ್, ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಹನುಮಂತ ಉದ್ಬಾಳ, ಇತರ ಪದಾಧಿಕಾರಿಗಳಾದ ವಕೀಲ ದತ್ತಾತ್ರೇಯ ಹಿರೇಕೊಟ್ನೇಕಲ್ , ಆರ್.ಚನ್ನಬಸವ ಬಾಗಲವಾಡ, ಕಾಶೀನಾಥ್ ಕುರ್ಡಿ, ಹನುಮಂತ ಸೀಕಲ್, ಮಲ್ಲೇಶಪ್ಪ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT