ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬಿಗರ ಚೌಡಯ್ಯ ಜಯಂತ್ಯುತ್ಸವ

Published 19 ಜನವರಿ 2024, 16:24 IST
Last Updated 19 ಜನವರಿ 2024, 16:24 IST
ಅಕ್ಷರ ಗಾತ್ರ

ರಾಯಚೂರು: ಜ.21 ರಂದು ನಗರದ ರಂಗ ಮಂದಿರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಲಿದೆ ಎಂದು  ಗಂಗಾಮತಸ್ಥ ಸಮಾಜ ಸೇವಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಶಾಂತಪ್ಪ ಹೇಳಿದರು.

ನಗರದ ಬಿ.ಆರ್‌.ಬಿ ವೃತ್ತದ ಬಳಿಯ ಅಂಬಿಗರ ಚೌಡಯ್ಯ ಪುತ್ಥಳಿಗೆ ಅಂದು ಬೆಳಿಗ್ಗೆ 8ಕ್ಕೆ ಗಣ್ಯರಿಂದ ಮಾಲಾರ್ಪಣೆ ಮಾಡಿದ ನಂತರ ಕಲಾ ತಂಡಗಳೊಂದಿಗೆ ಭಾವಚಿತ್ರ ಮೆರವಣಿಗೆ ನಡೆಸಲಾಗುವುದು ಎಂದು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಮಾಜದ ಅಧ್ಯಕ್ಷರು ಹಾಗೂ ಸಮಾಜದ ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು‌ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಐವರು ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದು ಹೇಳಿದರು.

ಶರಣಪ್ಪ, ಕಡಗೊಳ ಅಂಜನೇಯ, ನರಸಿಂಹಲು, ಪ್ರಭು, ಶ್ರೀನಿವಾಸ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT