ರಾಯಚೂರು: ನಗರಸಭೆಯಿಂದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿ ಬೀದಿ ನಾಯಿಗಳನ್ನು ಹಿಡಿಯಲಾಯಿತು.

ಪ್ರಸಕ್ತ ವರ್ಷದಲ್ಲಿ ಅಂದಾಜು 2,200 ಬೀದಿ ನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಲಾಗುವುದು ಎಂದು ಆಯುಕ್ತ ಗುರುಸಿದ್ಧಯ್ಯ ತಿಳಿಸಿದರು.

ಕಾರ್ಯಾಚರಣೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಪರಿಸರ) ಜೈಪಾಲ್ ರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಕ ಅಮರೇಶ ಡಿ, ಮಹಮದ್ ಖಾನ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

‘ನಗರದ ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದವು. ನಾಯಿಗಳ ದಾಳಿಯಿಂದ ಯುವತಿಯೊಬ್ಬರು ಸಾವನ್ನಪ್ಪಿದ್ದರು. ತಡವಾಗಿಯಾದರೂ ಎಚ್ಚೆತ್ತ ನಗರಸಭೆಯ ಕಾರ್ಯ ಶ್ಲಾಘನೀಯ’ ಎಂದು ರೈಲ್ವೆ ಮಂಡಳಿ ಸಲಹಾ ಸಮಿತಿ ಮಾಜಿ ಸದಸ್ಯ ಬಾಬುರಾವ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.