ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನ್ವಿ: ಗೌರವ ಧನ ಹೆಚ್ಚಳಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ

Published 23 ನವೆಂಬರ್ 2023, 15:29 IST
Last Updated 23 ನವೆಂಬರ್ 2023, 15:29 IST
ಅಕ್ಷರ ಗಾತ್ರ

ಮಾನ್ವಿ: ಗೌರವ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಸದಸ್ಯರು ಗುರುವಾರ ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಆವರಣದಲ್ಲಿ ಧರಣಿ ನಡೆಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ₹15ಸಾವಿರ ಗೌರವ ಧನ ನೀಡಲು ಬಜೆಟ್‌ನಲ್ಲಿ ಅನುಮೋದಿಸಬೇಕು. ಗ್ರಾಚ್ಯುಟಿ ಮತ್ತು ನಿವೃತ್ತಿ ವೇತನ ಯೋಜನೆ ಜಾರಿಗೆ ತರಬೇಕು. ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಹೆಚ್ಚು ದಿನಗಳಕಾಲ ಒಂದೇ ಕಡೆ ಸೇವೆ ಸಲ್ಲಿಸುತ್ತಿರುವ ಮೇಲ್ವಿಚಾರಕಿಯರನ್ನು ವರ್ಗಾವಣೆ ಮಾಡಬೇಕು. ಪ್ರತಿ ತಿಂಗಳು 5ನೇತಾರೀಖಿನ ಒಳಗೆ ಗೌರವಧನ ಜಮಾ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಧರಣಿ ನಿರತ ಕಾರ್ಯಕರ್ತೆಯರು ಮತ್ತು ಪದಾಧಿಕಾರಿಗಳು ಆಗ್ರಹಿಸಿದರು. ಮುಖಂಡ ಜಿ.ಶಿವರಾಜ ನಾಯಕ ವಕೀಲ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಗಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ನಿನ ಜಿಲ್ಲಾ ಘಟಕದ ಗೌರವಾಧ್ಯಕ್ಷ ಡಿ.ಹೆಚ್. ಕಂಬಳಿ, ಇತರ ಪದಾಧಿಕಾರಿಗಳಾದ ತಿಪ್ಪಯ್ಯ ಶೆಟ್ಟಿ, ಎಂ.ಬಿ.ಸಿದ್ರಾಮಯ್ಯ ಸ್ವಾಮಿ, ಸಂಗಯ್ಯ ಸ್ವಾಮಿ ಚಿಂಚರಕಿ, ಚನ್ನಮ್ಮ, ಲಲಿತಾ ಸಾಲಿ ಮತ್ತಿತರರು ಧರಣಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT