ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ಅಂಗನವಾಡಿ ನೌಕರರಿಂದ ಶಾಸಕರ ಕಚೇರಿ ಮುಂದೆ ಪ್ರತಿಭಟನೆ

Published 13 ಜೂನ್ 2024, 14:08 IST
Last Updated 13 ಜೂನ್ 2024, 14:08 IST
ಅಕ್ಷರ ಗಾತ್ರ

ರಾಯಚೂರು: ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ವಿರೋಧಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ನಗರದ ಶಾಸಕ ಡಾ. ಶಿವರಾಜ ಪಾಟೀಲ ಹಾಗೂ ಗ್ರಾಮೀಣ ಶಾಸಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಆನಂತರ ಶಾಸಕರಿಗೆ ಮನವಿ ಸಲ್ಲಿಸಿದರು. ದೇಶದಲ್ಲಿ ಮಕ್ಕಳ ಅಪೌಷ್ಟಿಕತೆ ನಿವಾರಣೆ ಮಾಡುವ ಉದ್ದೇಶದಿಂದ    ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಆರಂಭಿಸಲಾಗಿತ್ತು.  ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ನೀಡುವ ಜೊತೆಗೆ ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆ ಮಾಡಲಾಗುತ್ತಿದೆ. ಆದರೆ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ನಡೆಸಲು ಆದೇಶಿಸಿದ್ದು ಖಂಢನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ ಕೆ.ಜಿ, ಯುಕೆಜಿ ಪ್ರಾರಂಭಿಸಬೇಕು. ಈ ಬಗ್ಗೆ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.

‌‌ಅಂಗನವಾಡಿ ಕೇಂದ್ರ ಪೂರ್ವ ಪ್ರಾಥಮಿಕ ಶಿಕ್ಷಣ ಮತ್ತು ಪೌಷ್ಟಿಕತೆ ಎರಡರ ಬಗ್ಗೆಯೂ ಕಾಳಜಿ ವಹಿಸಲಾಗುತ್ತದೆ. ಪೂರ್ವ ಪ್ರಾಥಮಿಕ ತರಗತಿಯ ಆರಂಭಕ್ಕೆ ಸಂಬಂಧಿಸಿ ಅನೇಕ ನೂನ್ಯತೆಗಳಿದ್ದು  ಇದನ್ನು ಹಿಂಪಡೆಯಬೇಕು  ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ, ಕಾರ್ಯದರ್ಶಿ ನರ್ಮದಾ, ವೀರಗೋಟ ಗಂಗಮ್ಮ, ಮುಖಂಡರಾದ ಕೆ.ಜಿ ವೀರೇಶ, ಡಿ.ಎಸ್ ಶರಣಬಸವ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT