ಮಂಗಳವಾರ, ಸೆಪ್ಟೆಂಬರ್ 21, 2021
29 °C

ಅಂಗನವಾಡಿ ನೌಕರರ ಪರ ಶಾಸಕರು ಧ್ವನಿ ಎತ್ತಲಿ: ಸಿಐಟಿಯು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಅಂಗನವಾಡಿ ನೌಕರರ ಬೇಡಿಕೆಗಳ ಕುರಿತು ಸೆಪ್ಟೆಂಬರ್ 13ರಿಂದ ನಡೆಯುವ ರಾಜ್ಯ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಶಾಸಕ ಡಾ. ಶಿವರಾಜ ಪಾಟೀಲ ಹಾಗೂ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ ಆಗಿ ಅಂಗನವಾಡಿ ನೌಕರರು ಯಾವುದೇ ರಕ್ಷಣೆಯಿಲ್ಲದೇ ಲಾಕ್‌ಡೌನ್, ಕರ್ಫ್ಯೂ ಸಂದರ್ಭದಲ್ಲಿ ಮನೆಮನೆಗೆ ತಲುಪಿಸುವ ಕಾರ್ಯ ಮಾಡಿದ್ದಾರೆ. ಅಂಗನವಾಡಿ ನೌಕರ ಕಾರ್ಯವನ್ನು ವಿಶ್ವಬ್ಯಾಂಕಿನ ಭಾರತೀಯ ನಿರ್ದೇಶಕ ಜುನೇದ್ ಅಹ್ಮದ್ ಅವರು ಮೆಚ್ಚಿ ಅಪೌಷ್ಟಿಕ ನಿವಾರಣೆಗೆ ಬೆನ್ನೆಲುಬಾಗಿ ಕೆಲಸ ಮಾಡಿದ್ದಾರೆ ಎಂದಿದ್ದಾರೆ. ಮಾನವ ಹಕ್ಕುಗಳ ಆಯೋಗ ಇವರಿಗೆ ಕನಿಷ್ಠ ವೇತನ ಖಾತ್ರಿಪಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹ ಮಾಡಿದೆ.

2021–22 ರ ಬಜೆಟ್ ನ್ನು ಸೇವಾ ಜೇಷ್ಠತೆ, ಮಿನಿ ಕಾರ್ಯಕರ್ತೆರಿಗೆ ಮತ್ತು ಅಂಗನವಾಡಿ ಸಹಾಯಕರಿಗೆ ವೇತನ ಹೆಚ್ಚಳ ಮಾಡಬೇಕು. 2015ರಿಂದ ನಿವೃತ್ತರಾದ 7166 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಇಡುಗಂಟು ಕೊಡಲು  ₹339. 48 ಲಕ್ಷ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಶಿಫಾರಸು ಮಾಡಿದರೂ ಇದನ್ನು ಹೆಚ್ಚಿಸದೇ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದೆ. ಇವೆಲ್ಲ ಸಮಸ್ಯೆಗಳ ಬಗ್ಗೆ ಶಾಸಕರು ಅಧಿವೇಶನದಲ್ಲಿ ಚರ್ಚಿಸಿ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು  ಜಿಲ್ಲಾಧ್ಯಕ್ಷೆ ಎಚ್. ಪದ್ಮಾ, ತಾಲ್ಲೂಕು ಕಾರ್ಯದರ್ಶಿ ಪಾರ್ವತಿ ಮನ್ಸಲಾಪುರು, ರಂಗಮ್ಮ, ಗೋಕರಮ್ಮ, ನಿರ್ಮಲಾ, ಗಂಗಮ್ಮ, ಡಿಎಸ್. ಶರಣಬಸವ, ಕೆ.ಜಿ.ವೀರೇಶ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು