ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು: ಆಂಜನೇಯ ಸ್ವಾಮಿ ಮೂರ್ತಿ ಮೆರವಣಿಗೆ ನಾಳೆ

Published 11 ಫೆಬ್ರುವರಿ 2024, 14:43 IST
Last Updated 11 ಫೆಬ್ರುವರಿ 2024, 14:43 IST
ಅಕ್ಷರ ಗಾತ್ರ

ಸಿಂಧನೂರು: ನಗರದ ಬಪ್ಪುರ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತಿಡಿಗೋಳ ಆಂಜನೇಯ ಸ್ವಾಮಿಯ ಮೂರ್ತಿ ಪ್ರತಿಷ್ಠಾಪಣೆ ಸಮಾರಂಭ ಫೆ.22 ರಂದು ಜರುಗಲಿದ್ದು ಎಪಿಎಂಸಿ ಗಜಾನನ ದೇವಸ್ಥಾನದಿಂದ ಫೆ.12 ರಂದು ಮೂರ್ತಿಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಾಗರ ಹನುಮಾನ ಸೇವಾ ಟ್ರಸ್ಟ್ ಅಧ್ಯಕ್ಷ ರಂಗಣ್ಣ ದೇಸಾಯಿ ತಿಳಿಸಿದ್ದಾರೆ.

ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಫೆ.22ರಂದು ಗಣ ಹೋಮ, ನವಗ್ರಹ ಹೋಮ, ಪ್ರತಿಷ್ಠಾಪಣಾ ಹೋಮ, ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ ಸಮರ್ಪಣೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT