ಶುಕ್ರವಾರ, ಜೂನ್ 25, 2021
29 °C

ರಾಯಚೂರು: ಬೆಳೆ ಸಮೀಕ್ಷೆಗೆ ಆ್ಯಪ್‌ ಅನುಕೂಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ರೈತರು ತಾವು ಬೆಳೆದ ಬೆಳೆಗಳನ್ನು ಆ್ಯಪ್‌ ಮೂಲಕ ಅಪ್‌ಲೋಡ್‌ ಮಾಡಿ ಸಲ್ಲಿಸಬಹುದಾಗಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ ಆ್ಯಪ್‌ ಸಿದ್ಧಪಡಿಸಲಾಗಿದೆ. ಬೆಳೆ ಸಮೀಕ್ಷೆಗೆ ಇದರಿಂದ ಅನುಕೂಲವಾಗಿದೆ ಎಂದು ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಹೇಶ ಹೇಳಿದರು.

ತಾಲ್ಲೂಕಿನ ಯಾಪಲದಿನ್ನಿ ಹೋಬಳಿಯ ಅಪ್ಪನದೊಡ್ಡಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ 2020-12 ಸಾಲಿನ ರೈತರಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಳೆ‌ ಸಮೀಕ್ಷೆಗೆ ಮಾಹಿತಿ ಅಪ್‌ಲೋಡ್‌ ಮಾಡುವುದಕ್ಕೆ ಆಗಸ್ಟ್‌ 24 ಕೊನೆಯ ದಿನಾಂಕ. ರೈತರಿಗೆ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ಅಳವಡಿಸಲು ತೊಂದರೆಯಾದಲ್ಲಿ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ಈ ಬೆಳೆ ಸಮೀಕ್ಷೆ ರೈತರಿಗೆ ಅನುಕೂಲವಾಗಿದ್ದು, ಮುಂದೆ ಇಲಾಖೆಯಿಂದ ದೊರೆಯುವ ಪರಿಹಾರ ವಿಮೆಗಳಿಗೆ ಸಹಾಯಕ ಆಗುತ್ತದೆ ಎಂದು‌ ತಿಳಿಸಿದರು.

ಯಾಪಲದಿನ್ನಿ ಭಾಗದಲ್ಲಿ ಮೊಸಂಬಿ, ಮಾವು ಹಾಗೂ ತೋಟಗಾರಿಕಾ ಬೆಳೆಗಳನ್ನು ಬೆಳೆದಿರುವ ರೈತರು ಬೆಳೆ ಸಮೀಕ್ಷೆಯ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಯೋಜನ ಪಡೆದರು.

ರೈತರಿಗೆ ಮೊಬೈಲ್ ಮೂಲಕ ಸಮೀಕ್ಷೆ ಮಾಡುವ ವಿಧಾನವನ್ನು ತೋಟಗಾರಿಕಾ ಅಧಿಕಾರಿ ವೆಂಕಟೇಶ ಮನವರಿಕೆ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು