ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಮೂಲ ಸೌಕರ್ಯ ಒದಗಿಸಲು ಒತ್ತಾಯ

Published 22 ಡಿಸೆಂಬರ್ 2023, 16:13 IST
Last Updated 22 ಡಿಸೆಂಬರ್ 2023, 16:13 IST
ಅಕ್ಷರ ಗಾತ್ರ

ರಾಯಚೂರು: ನಗರದಲ್ಲಿ ಗುಣಮಟ್ಟ ರಸ್ತೆ ಹಾಗೂ ಸ್ವಚ್ಛ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸಲು ಒತ್ತಾಯಿಸಿ ಲೋಕ ಜನಶಕ್ತಿ ಪಾರ್ಟಿ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ  ಮನವಿ ಸಲ್ಲಿಸಿದರು.

ನಗರದ ಗದ್ವಾಲ್ ರಸ್ತೆ ಸಂಪೂರ್ಣ ಹದಗೆಟ್ಟಿದೆ. 6 ತಿಂಗಳಾದರೂ ದುರಸ್ತಿಗೊಳಿಸುತ್ತಿಲ್ಲ. ರಸ್ತೆಯ ಮೇಲೆ ಚರಂಡಿ ನೀರು ನಿಂತು ಗಬ್ಬು ನಾರುತ್ತಿದೆ. ಸಾರ್ವಜನಿಕರಿಗೆ ಹಾಗೂ ಶಾಲಾ–ಕಾಲೇಜಿನ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತೆರಳಲು ಆಗದೇ ಪರಿತಪಿಸುವಂತಾಗಿದೆ. ಶೀಘ್ರವೇ ರಸ್ತೆ ದುರಸ್ತಿಗೊಳಿಸಿ ನಗರಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಗೋವಿಂದ, ರಂಗಪ್ಪ, ನಾರಾಯಣ ಕೆ., ಶೇಖರಪ್ಪ, ತಿಮ್ಮಪ್ಪ, ರಘುನಂದ ಯಾದವ, ಅಶ್ರಫ್ ಪಾಷ, ಹಂಪಯ್ಯ ಹಾಗೂ ಉಮೇಶ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT