ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದರಸಾಗಳಿಗೆ ಗಣಕೀಕೃತ ಶಿಕ್ಷಣ ನೀಡಲು ಅರ್ಜಿ ಆಹ್ವಾನ

Published 8 ಜನವರಿ 2024, 16:01 IST
Last Updated 8 ಜನವರಿ 2024, 16:01 IST
ಅಕ್ಷರ ಗಾತ್ರ

ರಾಯಚೂರು: 2023-24ನೇ ಸಾಲಿನಲ್ಲಿ ರಾಜ್ಯದಲ್ಲಿರುವ ನೋಂದಾಯಿತ ಮದರಸಾಗಳಿಗೆ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಜಿಲ್ಲೆಯಲ್ಲಿನ ಅರ್ಹ ಮದರಸಾಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು https://dom.karnataka.gov.in ಲಿಂಕ್ ಮೂಲಕ ಜ.20ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಇಲಾಖೆಯ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಲೋಕ ಅದಾಲತ್ ಮಾರ್ಚ್ 9ರಂದು 

ರಾಯಚೂರು: ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಮಾರ್ಚ್‌ 9ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಲೋಕ ಅದಾಲತ್‍ ಏರ್ಪಡಿಸಲಾಗಿದೆ.

ಲೋಕ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಮತ್ತು ಕ್ರಿಮಿನಲ್ (ರಾಜಿಯಾಗುವಂತಹ) ಮೊಕದ್ದಮೆಗಳು, ಮೋಟಾರ್‌ ವಾಹನ ಕಾಯ್ದೆ, ಕುಟುಂಬ ನ್ಯಾಯಾಲಯದ ಪ್ರಕರಣಗಳು ಸೇರಿದಂತೆ ವಿವಿಧ ಬಗೆಯ ಪ್ರಕರಣಗಳನ್ನು ಪರಸ್ಪರ ರಾಜಿ ಮೂಲಕ ಇತ್ಯರ್ಥ ಮಾಡಿಕೊಳ್ಳಲು ಅವಕಾಶವಿದೆ.

ವಕೀಲರು, ಕಕ್ಷಿದಾರರು, ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರ ಕಾರ್ಯದರ್ಶಿ ದಯಾನಂದ ಬೇಲೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT