ರಾಯಚೂರು: ‘ಅತಿಯಾಗಿ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕ್ಷೀಣಿಸುತ್ತಿದೆ. ಇದರಿಂದ ಬೆಳೆಗಳ ಉತ್ಪಾದನೆಯ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ. ಸಮಗ್ರ ಪೋಷಕಾಂಶಗಳನ್ನು ಭೂಮಿಗೆ ಬಳಸುವುದರಿಂದ ಮಣ್ಣಿನ ಫಲವತ್ತತೆ ಕಾಪಾಡಬಹುದಾಗಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಎನ್.ಶಿವಶಂಕರ ತಿಳಿಸಿದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ವಿಸ್ತರಣಾ ನಿರ್ದೇಶನಾಲಯ, ಸಮೇತಿ ಉತ್ತರ ಕೃಷಿ ವಿಶ್ವವಿದ್ಯಾಲಯ ಮತ್ತು ಮ್ಯಾನೇಜ್ ಹೈದರಾಬಾದ್ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಸಮಗ್ರ ಪೋಷಕಾಂಶಗಳ ನಿರ್ವಹಣೆ ಕುರಿತು 15 ದಿನಗಳ ತರಬೇತಿ ಪಡೆದ ರಾಯಚೂರು ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

‘ವಿಶ್ವವಿದ್ಯಾಲಯವು ಸಾವಯವ ಕೃಷಿಯಲ್ಲಿ ಮತ್ತು ಮಣ್ಣಿನ ಫಲವತ್ತತೆಯಲ್ಲಿ ಸಾಕಷ್ಟು ಸಂಶೋಧನೆಗಳನ್ನು ಮಾಡಿದೆ. ರೈತರು ವಿವಿಧ ತಂತ್ರಜ್ಞಾನಗಳನ್ನು ಬಳಸಿಕೊಳ್ಳಬೇಕು’ ಎಂದು ಹೇಳಿದರು.

ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಎ.ಅಮರೇಗೌಡ ಮಾತನಾಡಿ,‘ಕೃಷಿಯಲ್ಲಿ ಕಡಿಮೆ ಖರ್ಚಿನ ತಂತ್ರಜ್ಞಾನಗಳು ಅಗತ್ಯವಿದೆ. ರೈತರು ಸ್ಥಳೀಯ ಸಂಪನ್ಮೂಲ ಬಳಸಬೇಕು ಮತ್ತು ಮೂಲ ಪೋಷಕಾಂಶಗಳ ಜೊತೆಗೆ ಇತರೆ ಗೊಬ್ಬರಗಳಿಗೂ ಸಹ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.

ವಿಸ್ತರಣಾ ನಿರ್ದೇಶನಾಲಯದ ಸಹ ವಿಸ್ತರಣಾ ನಿರ್ದೇಶಕ ಎ.ಆರ್.ಕುರುಬರ ಮಾತನಾಡಿ, ‘ಮೊದಲ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರಿಗೆ ಇಂಥ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.

ರಾಯಚೂರಿನ ಉಪ ನೋಂದಣಾಧಿಕಾರಿ ಎಂ.ಆರ್.ಮನೋಹರ ಹಾಗೂ ವಿಸ್ತರಣಾ ನಿರ್ದೇಶನಾಲಯದ ತಾಂತ್ರಿಕ ಅಧಿಕಾರಿ ಡಿ.ಕೆ.ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಹಾಯಕ ನಿಬಂಧಕ ಶೇಖ್ ಹುಸೇನ್, ವಿಸ್ತರಣಾ ನಿರ್ದೇಶನಾಲಯದ ತಾಂತ್ರಿಕ ಅಧಿಕಾರಿ ಹನಮಂತ ನಾಯಕ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲೆಯ 47 ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಲ್ಯಾಣ ಕೃಷಿ ರೇಡಿಯೊ ಕೇಂದ್ರದ ಕಾರ್ಯಕ್ರಮ ಸಹಾಯಕ ಅಮರೇಶ ಆಶಿಹಾಳ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.