ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಸುಶಮೀಂದ್ರ ತೀರ್ಥರ ಆರಾಧನಾ ಮಹೋತ್ಸವ

Published 26 ಏಪ್ರಿಲ್ 2024, 20:15 IST
Last Updated 26 ಏಪ್ರಿಲ್ 2024, 20:15 IST
ಅಕ್ಷರ ಗಾತ್ರ

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸುಶಮೀಂದ್ರ ತೀರ್ಥರ ಆರಾಧನಾ ಮಹೋತ್ಸವದ ಪ್ರಯುಕ್ತ ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿಗಳು ತಂದಿದ್ದ ಶ್ರೀವಾರಿ ವಸ್ತ್ರವನ್ನು ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.

ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಶ್ರೀವಾರಿ ವಸ್ತ್ರವನ್ನು ತಂದಿದ್ದ ಅಧಿಕಾರಿಗಳನ್ನು ಬರಮಾಡಿಕೊಂಡರು. ನಂತರ ಸುಶಮೀಂದ್ರ ತೀರ್ಥರ ಮೂಲ ಬೃಂದಾವನಕ್ಕೆ ಅರ್ಪಿಸಿದರು.

ಬೆಳಿಗ್ಗೆ ವಿಜೃಂಭಣೆಯಿಂದ ರಥೋತ್ಸವ, ಮಹಾ ಪಂಚಾಮೃತಾಭಿಷೇಕ ನಡೆಯಿತು. ಉಂಜಾಳ ಮಂಟಪದಲ್ಲಿ ಶ್ರೀ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ಪಂಡಿತರಿಂದ ಜ್ಞಾನೋದಯ ಪ್ರವಚನಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT