ರಾಯಚೂರು: ಭಾರತೀಯ ಸೇನೆಯ ಮೇಜರ್ ಬಸವ ಪ್ರಭು ಹಾಗೂ ಸಂಜೀವ್ ಸಾಧುನವರ ನೇತೃತ್ವದ ತಂಡವು ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಿಗೆ ಇತ್ತೀಚಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಜಿಲ್ಲೆಯಲ್ಲಿ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹಮಾಮಾನ ಇಲಾಖೆ ವರದಿ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಂಡವು ಪರಿಶೀಲನೆ ನಡೆಸಿತು.

ರಾಯಚೂರು ತಾಲ್ಲೂಕಿನ ಅತ್ಕೂರು, ಕುರ್ವಕರ್ದಾ, ಕುರ್ವಕಲಾ, ಡಿ.ರಾಂಪುರ, ಕಾಡೂರು, ಗುರ್ಜಾಪುರ, ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ದೇವದುರ್ಗ ತಾಲ್ಲೂಕಿನ ಅಪ್ರಾಳ, ಬಸವಂತಪುರ, ಹಿರೇರಾಯಕುಂಪಿ, ಚಿಕ್ಕರಾಯಕುಂಪಿ, ಗೂಗಲ್, ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್ ಸೇರಿದಂತೆ ಶಕ್ತಿನಗರದ ಹೆಲಿಪ್ಯಾಡ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ರಾಯಚೂರಿನ ಅಗ್ನಿಶಾಮಕ ಕಚೇರಿಗೆ ಭೇಟಿ ನೀಡಿ ಪ್ರವಾಹದ ಸಂದರ್ಭದಲ್ಲಿ ಉಪಯೋಗಿಸುವ ರಕ್ಷಣಾ ಸಾಮಗ್ರಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಒಂದು ವೇಳೆ ಪ್ರವಾಹ ಬಂದಲ್ಲಿ ಸಕಲ ರೀತಿಯಲ್ಲಿ ಸಜ್ಜಾಗಿರಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೇನಾ ಅಧಿಕಾರಿ ಅಭಯಕುಮಾರ ಹಾಗೂ ಸಂಜೀವ್ ಸಾಧುನವರ ಸೂಚಿಸಿದರು.

ರಾಯಚೂರು ಹಾಗೂ ದೇವದುರ್ಗ ತಾಲ್ಲೂಕಿನ ತಹಶೀಲ್ದಾರರು, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ವಿಪತ್ತು ಪರಿಣಿತರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.