ರಾಯಚೂರು: ‘ಭಾರತೀಯ ಸೇನೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 8 ರಿಂದ 22ರವರೆಗೆ ನಗರದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಗೆ ಜಿಲ್ಲೆಯ ಎಲ್ಲ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು’ ಎಂದು ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ ಸೂಚಿಸಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸೇನಾ ನೇಮಕಾತಿ ರ್ಯಾಲಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ರಾಜ್ಯದ ಬೇರೆ, ಬೇರೆ ಜಿಲ್ಲೆಗಳಿಂದ ಸುಮಾರು 16 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ರ್ಯಾಲಿಯ ಯಶಸ್ವಿ ನಿರ್ವಹಣೆಗಾಗಿ ವೇದಿಕೆ ಸಮಿತಿ, ಭದ್ರತಾ ಸಮಿತಿ, ಮೂಲ ಸೌಕರ್ಯ ಸಮಿತಿ, ಸಾರಿಗೆ ಸಮಿತಿ, ಆಹಾರ ಸಮಿತಿ, ವಸತಿ ಸಮಿತಿ, ಆರೋಗ್ಯ ನೈರ್ಮಲ್ಯೀಕರಣ ಸಮಿತಿ ಹಾಗೂ ದಾಖಲೆಗಳ ಪರಿಶೀಲನೆ ಸಮಿತಿ ರಚಿಸಲಾಗಿದೆ. ಎಲ್ಲ ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು‘ ಎಂದು ಹೇಳಿದರು.

‘ರ್ಯಾಲಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಹಾಗೂ ನಿಯೋಜಿತ ಸಿಬ್ಬಂದಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಮತ್ತು ಬಳಕೆಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಹಾಗೂ ಕ್ರೀಡಾಂಗಣದಲ್ಲಿ ಸ್ವಚ್ಛತೆಗೆ ಕ್ರಮ ವಹಿಸಬೇಕು. ಅಭ್ಯರ್ಥಿಗಳಿಗೆ ತಂಗಲು ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕು’ ಎಂದು ಸೂಚನೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ನೇಮಕಾತಿ ರ್ಯಾಲಿ ಸಂದರ್ಭದಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗುವುದು. ಜನಸಂದಣಿ ನಿರ್ವಹಣೆಗಾಗಿ ಕ್ರೀಡಾಂಗಣದ ಹೊರಗಡೆ, ಮುಂಭಾಗದಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಸಾರ್ವಜನಿಕ ರಸ್ತೆ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು’ ಎಂದು ಹೇಳಿದರು.

ರಾಯಚೂರು ತಹಶೀಲ್ದಾರ್ ಸುರೇಶ ವರ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಶ ಬಾಬು, ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ದೇಸಾಯಿ, ಪಶ್ಚಿಮ ವೃತ್ತದ ಸಿಪಿಐ ನಿಂಗಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವ್ಯವಸ್ಥಾಪಕ ಸಂತೋಷ, ಪಶ್ಚಿಮ ಪೊಲೀಸ್ ಠಾಣೆಯ ಪಿ.ಎಸ್.ಐ ಮಂಜುನಾಥ, ಅಗ್ನಿಶಾಮಕ ದಳದ ರವೀಂದ್ರ ಘಟಿಗಿ ಉಪಸ್ಥಿತರಿದ್ದರು.

Highlights - ಆರೋಗ್ಯ ಅಧಿಕಾರಿಗಳ ತಂಡ ನಿಯೋಜಿಸಿ ಅಗ್ನಿಶಾಮಕ ತಂಡ, ಅಂಬುಲೆನ್ಸ್ ಇರಲಿ ಕ್ರೀಡಾಂಗಣದಲ್ಲಿ ವಿದ್ಯುತ್ ದೀಪದ ವ್ಯವಸ್ಥೆ ಮಾಡಿ

Quote - ಸೇನಾ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು 15 ಸಾವಿರ ಅಭ್ಯರ್ಥಿಗಳು ಬರುವ ಸಾಧ್ಯತೆ ಇರುವ ಕಾರಣ ಪೂರ್ವಭಾವಿ ಸಿದ್ಧತೆ ನಡೆಸಲಾಗುತ್ತಿದೆ. ಗಜಾನನ ಬಾಳೆ ಉಪ ವಿಭಾಗಾಧಿಕಾರಿ

Cut-off box - ನೇಮಕಾತಿ ರ್ಯಾಲಿಗೆ ಸಹಕಾರ ಕೊಡಿ ‘ರಾಯಚೂರಲ್ಲಿ 14ದಿನಗಳ ವರೆಗೆ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಹಕಾರ ನೀಡಬೇಕು‘ ಎಂದು ಸೇನಾ ನೇಮಕಾತಿ ಅಧಿಕಾರಿ ಎ.ಉಪಾಧ್ಯಾಯ ಮನವಿ ಮಾಡಿದರು. ‘ನೇಮಕಾತಿ ಪಾರದರ್ಶಕವಾಗಿ ನಡೆಸುತ್ತಿರುವುದರಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಮತ್ತು ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆಗಾಗಿ ಕಂದಾಯ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು‘ ಎಂದು ಕೋರಿದರು. ‘ಸೇನಾ ನೇಮಕಾತಿ ರ್ಯಾಲಿಯು ಸುಸೂತ್ರವಾಗಿ ನಡೆದರೆ ರಾಯಚೂರು ಜಿಲ್ಲಾಡಳಿತಕ್ಕೆ ಮತ್ತು ಸೇನೆಗೂ ಒಳ್ಳೆಯ ಹೆಸರು ಬರಲಿದೆ. ಹೀಗಾಗಿ ರ್ಯಾಲಿಯನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತದ ಸಹಕಾರ ಅಗತ್ಯ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.