ಬಾಕಿ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಗುರುವಾರ , ಜೂಲೈ 18, 2019
24 °C

ಬಾಕಿ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

Published:
Updated:
Prajavani

ರಾಯಚೂರು: ಬಾಕಿ ವೇತನ ಪಾತಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಬುಧವಾರ ಪ್ರತಿಭಟನೆ ನಡೆಸಿತು.

ನಗರದ ಸಾರ್ವಜನಿಕ ಉದ್ಯಾನದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೂ ಮೆರವಣಿಗೆ ನಡೆಸಿ ಗಮನ ಸೆಳೆದರು.

ಮೂರ ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಉಪಜೀವನ ನಡೆಸುವುದು ದುಸ್ತರವಾಗಿದ್ದು, ಕೂಡಲೇ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸರ್ಕಾರಿ ಆಸ್ಪತ್ರೆ ರಿಮ್ಸ್‌, ತಾಲ್ಲೂಕು ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ವಿಶ್ರಾಂತಿ ಕೊಠಡಿಗಳನ್ನು ನಿರ್ಮಾಣ ಮಾಡಬೇಕು. ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನವನ್ನು ಜಮಾಗೊಳಿಸಬೇಕು ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರಿಗೆ ಸೂಕ್ತ ರಕ್ಷಣೆ ಸಿಗುವಂತಾಗಬೇಕು. ಕಿರುಕುಳ ತಪ್ಪಿಸಬೇಕು. ಮದುವೆ ಸಮಾರಂಭ ಸೇರಿದಂತೆ ಇತರೆ ತುರ್ತು ಕಾರಣಗಳಿಗೆ ರಜೆ ಪಡೆದುಕೊಳ್ಳಲು ಅವಕಾಶ ಒದಗಿಸಬೇಕು ಎಂದರು.

ಅನಗತ್ಯವಾಗಿ ಆರ್‌ಐ ಸಮೀಕ್ಷೆ ಮಾಡಿಸುವುದು ಸರಿಯಾದ ಕ್ರಮವಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ಆಶಾ ಕುಂದುಕೊರತೆ ನಿವಾರಣೆ ಸಭೆ ಆಯೋಜಿಸಬೇಕು ಎಂದು ಒತ್ತಾಯಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿರೇಶ ಎನ್‌.ಎಸ್‌. ಶರಣಪ್ಪ ಉದ್ಭಾಳ, ಚನ್ನಬಸವ ಜಾನೇಕಲ್‌, ಮಹೇಶ ಸಿ., ಈರಮ್ಮ.ರಾಧಾ, ಬೀಮಮ್ಮ, ಲಕ್ಷ್ಮೀ ನರಸುಬಾಯಿ, ಗೌರಮ್ಮ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !