ಹಟ್ಟಿ ಚಿನ್ನದ ಗಣಿ: ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಗೆ ಬರುವ ಜತ್ತಿ ಕಾಲೊನಿಯಲ್ಲಿ ಮೂರು ತಿಂಗಳ ಹಿಂದೆ ರಸ್ತೆಗೆ ಹಾಕಿದ ಡಾಂಬರ್ ಕಿತ್ತು ಹೋಗಿದೆ. ರಸ್ತೆ ಸಂಪೂರ್ಣ ಕಳಪೆಯಿಂದ ಕೂಡಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಕಾಮಗಾರಿ ಗುಣಮಟ್ಟದಿಂದ ನಿರ್ಮಾಣ ಮಾಡಿಲ್ಲ. ಇದರಿಂದ ರಸ್ತೆ ಹಾಳಾಗಿದೆ. ಅಲ್ಲದೆ, ಕಾರ್ಮಿಕರ ಹಣ ಕೂಡ ಕಾಮಗಾರಿ ಹೆಸರಿನಲ್ಲಿ ಪೋಲಾಗುತ್ತಿದೆ ಎನ್ನುತ್ತಾರೆ ಕಾಲೊನಿ ನಿವಾಸಿಗಳು.

ಗಣಿ ಕಂಪನಿ ಕಾರ್ಮಿಕರು ವಾಸ ಮಾಡುವ ಕಾಲೊನಿಗಳ ರಸ್ತೆಗಳ ದುರಸ್ತಿಗೆ ಚಿನ್ನದ ಗಣಿ ಆಡಳಿತ ವರ್ಗ ಮುಂದಾಗಿದೆ. ಟೆಂಡರ್ ಪಡೆದ ಗುತ್ತಿಗೆದಾರ ಬಹುತೇಕ ಎಲ್ಲ ರಸ್ತೆಗಳನ್ನು ಕಳಪೆ ಮಟ್ಟದಿಂದ ಮಾಡಿದ್ದಾರೆ. ಕಾಮಗಾರಿಯನ್ನು ಗಣಿ ಕಂಪನಿಯ ಅಧಿಕಾರಿಗಳು, ಎಂಜಿನಿಯರ್ ಗಮನಹರಿಸುವಲ್ಲಿ ವಿಫಲರಾಗಿದ್ದಾರೆ. ಕಳಪೆ ಕಾಮಗಾರಿಗೆ ಇಲ್ಲಿನ ಅಧಿಕಾರಿಗಳು ಬೆಂಬಲ ನೀಡಿದ್ದಾರೆ ಎಂದು ಲಾಲ್ ಪೀರ್ ಆರೋಪ ಮಾಡಿದ್ದಾರೆ.

ನಿಯಮಗಳನ್ನು ಗಾಳಿಗೆ ತೂರಿ, ಮನ ಬಂದಂತೆ ರಸ್ತೆ ನಿರ್ಮಾಣ ಮಾಡಿರುವ ಗುತ್ತಿಗೆದಾರನ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಕಾರ್ಮಿಕರ ಕಾಲೊನಿಗಳ ರಸ್ತೆ ಗುಣಮಟ್ಟದಿಂದ ನಿರ್ಮಾಣಕ್ಕೆ ಗಣಿ ಕಂಪನಿ ಆಡಳಿತ. ಮುಂದಾಗಬೇಕು ಎನ್ನುತ್ತಾರೆ ಇಲ್ಲಿನ . ಕಾರ್ಮಿಕರು.

ಗಣಿ ಕಂಪನಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮಾಡಿದರೆ, ಗಣಿ ಕಂಪನಿ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕರವೇ ಹಟ್ಟಿ ಘಟಕದ ಅಧ್ಯಕ್ಷ ಮೌನೇಶ ಕಾಕಾನಗರ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.