ಬುಧವಾರ, ಆಗಸ್ಟ್ 4, 2021
22 °C

ಎಟಿಎಂ ನಕಲು ಮಾಡಿ ಹಣ ಡ್ರಾ; ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಕಲಿ ಎಟಿಎಂ ಬಳಸಿ ಉಳಿತಾಯ ಖಾತೆಯಿಂದ ಹಣ ದೋಚುತಿದ್ದ ಪ್ರಕರಣವನ್ನು ಭೇದಿಸಿರುವ ರಾಯಚೂರು ಸೈಬರ್‌ ಪೊಲೀಸರು ಉತ್ತರ ಪ್ರದೇಶದ ಇಬ್ಬರು ಆರೋಪಿಗಳನ್ನು ಸೈಬರ್ ಬಂಧಿಸಿದ್ದಾರೆ.

ಜಿಲ್ಲೆಯ ಸೈಬರ್ ಪೊಲೀಸ್ ಠಾಣೆಯಲ್ಲಿ ಎಟಿಎಂ ಕಳ್ಳತನದ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದಾಗ ಅರೋಪಿ ಹರಿಲಾಲ್ ಹಾಗೂ ಬ್ರಿಜವಾನ್ ಬಲೆಗೆ ಬಿದ್ದಿದ್ದಾರೆ. ಇವರ ತಂಡ ಕಳೆದ ಹಲವಾರು ದಿನಗಳಲ್ಲಿ ರಾಜ್ಯದ ಹಲವೆಡೆ ಈ ರೀತಿ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ಎಟಿಎಂ ನಕಲು ಮಾಡಿ ಉಳಿತಾಯ ಖಾತೆಯಿಂದ ಒಟ್ಟು ₹2,81,069 ಹಣ ಡ್ರಾ ಮಾಡಿಕೊಂಡಿದ್ದಾರೆ. 

ಸಾರ್ವಜನಿಕರು ಎಚ್ಚರಿಕೆಯಿಂದ ತಮ್ಮ ಎಟಿಎಂ ಇಟ್ಟುಕೊಳ್ಳಬೇಕು. ಒಂದುವೇಳೆ ಕಳೆದು ಹೋದಲ್ಲಿ ಕೂಡಲೇ ಬ್ಯಾಂಕ್‌ಗೆ  ಮಾಹಿತಿ ನೀಡಿ ಲಾಕ್ ಮಾಡಿಸಬೇಕು. ಆನಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು