ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರೇಗೌಡ ಮಲ್ಲಾಪುರಗೆ ‘ಪರಿಸರ ರತ್ನ’ ಪ್ರಶಸ್ತಿ ಪ್ರದಾನ

Published 8 ಜೂನ್ 2023, 11:31 IST
Last Updated 8 ಜೂನ್ 2023, 11:31 IST
ಅಕ್ಷರ ಗಾತ್ರ

ಸಿಂಧನೂರು: ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ವತಿಯಿಂದ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದ ಸೆಂಟ್ರಲ್ ಕಾಲೇಜು ಆವರಣದಲ್ಲಿ ಸೋಮವಾರ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಂಧನೂರಿನ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರಿಗೆ 2022-2023ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಹಾಗೂ ₹1 ಲಕ್ಷ ನಗದು ಚೆಕ್‍ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಿ ಗೌರವಿಸಿದರು.

ಐದಾರು ವರ್ಷಗಳಿಂದ ಅಮರೇಗೌಡ ಮಲ್ಲಾಪುರ ಅವರು ವನಸಿರಿ ಫೌಂಡೇಶನ್ ಸ್ಥಾಪಿಸಿ ಸಿಂಧನೂರು ತಾಲ್ಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಸುಮಾರು 50 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಿ ಸಾರ್ವಜನಿಕರಿಗೆ ಪರಿಸರ ಜಾಗೃತಿ ಮೂಡಿಸುತ್ತಿರುವ ಕಾರ್ಯವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಪರಿಸರ ಅರಣ್ಯ ಸಚಿವ ಈಶ್ವರ ಖಂಡ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT