ಶನಿವಾರ, ಸೆಪ್ಟೆಂಬರ್ 18, 2021
29 °C

‘ಎಲ್ಲರೂ ವಿಮೆ ಸೌಕರ್ಯ ಪಡೆಯಿರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಹೆಚ್ಚುತ್ತಿರುವ ವೈದ್ಯಕೀಯ ವೆಚ್ಚಗಳಿಂದ ಮದ್ಯಮವರ್ಗದ ಪ್ರಗತಿಗೆ ಹಿನ್ನಡೆಯಾಗುತ್ತಿದ್ದು ಪ್ರತಿಯೊಬ್ಬರೂ ಆರೋಗ್ಯ ವಿಮೆ ಹೊಂದುವುದು ಅವಶ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ತಿಳಿಸಿದರು.

ನಗರದ ಸ್ಟೇಶನ್ ಬಜಾರ್ ಶಾಲೆಯಲ್ಲಿ ಈಚೆಗೆ ನಡೆದ ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಜಿಲ್ಲೆಯಲ್ಲಿ ಸುಮಾರು 1,000 ನಿರ್ಗತಿಕರಿಗೆ ಪ್ರತೀ ತಿಂಗಳು ಮಾಸಾಶನ ನೀಡಲಾಗುತ್ತಿದೆ. 26 ಸರ್ಕಾರಿ ಶಾಲೆಗಳಿಗೆ ಡೆಸ್ಕ್, ಬೆಂಚ್ ನೀಡಲಾಗಿದೆ. ವೈದ್ಯಕೀಯ ಸಹಾಯಧನ, ವಾತ್ಸಲ್ಯ ಕಿಟ್ ನೀಡಲಾಗಿದ್ದು ಅನೇಕ ಜನಪರ ಕಾರ್ಯಕ್ರಮ ಹಮ್ಮಿಕೊಂಡಿದೆ.

ಪ್ರಸಕ್ತ ಸಾಲಿನಲ್ಲಿ ಸದಸ್ಯರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದ್ದು ಕೇವಲ ₹100 ವೆಚ್ಚದಲ್ಲಿ ಸಂಘದ ಸದಸ್ಯರಿಗೆ ಆರೋಗ್ಯ ರಕ್ಷಣೆ ಒದಗಿಸುವ ಯೋಜನೆಯಾಗಿದ್ದು ಜಿಲ್ಲೆಯಲ್ಲಿ ಲಕ್ಷ ಜನರ ನೊಂದಾಯಿಸುವ ಗುರಿ ಹೊಂದಿದ್ದೇವೆ. ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕಿನ ಯೋಜನಾಧಿಕಾರಿ ರಘುಪತಿಗೌಡ, ವಿಮಾ ಸಮನ್ವಾಧಿಕಾರಿ ಕಲ್ಲಪ್ಪ, ಮೇಲ್ವಿಚಾರಕ ನಾಗರಾಜ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು