ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ಮಾದಕ ವಸ್ತು ಸೇವನೆ ತಡೆಗೆ ಜಾಗೃತಿ

Published 6 ಜನವರಿ 2024, 15:30 IST
Last Updated 6 ಜನವರಿ 2024, 15:30 IST
ಅಕ್ಷರ ಗಾತ್ರ

ರಾಯಚೂರು: ‘ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವಿಶೇಷವಾಗಿ ಯುವಕರು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು’ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋದೊಂದಿಗೆ ಆಯೋಜಿಸಿದ್ದ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ಸೈಬರ್ ಅಪರಾಧಗಳ ಕುರಿತು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಎಚ್ಚರಿಕೆ ವಹಿಸುವುದು ಅಗತ್ಯ’ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾತನಾಡಿ, ಮಾದಕ ವಸ್ತುಗಳ ಬಳಕೆಯಿಂದಾಗುವ ಹಾನಿಗಳ ಬಗ್ಗೆ ಹೆಚ್ಚಾಗಿ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಬೇಕು’ ಎಂದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚೇತನಕುಮಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು‌ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT