ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಪಂ ಕಚೇರಿಯಲ್ಲಿ ಆಯುಷ್ಮಾನ್ ಕಾರ್ಡ್‌ ವಿತರಣೆ’

Last Updated 3 ಫೆಬ್ರುವರಿ 2020, 15:31 IST
ಅಕ್ಷರ ಗಾತ್ರ

ರಾಯಚೂರು:ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್‌ನ್ನು ಫೆಬ್ರುವರಿ 6 ಮತ್ತು 7 ರಂದು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕ್ಯಾಂಪ್‌ಗಳನ್ನು ನಡೆಸಿ ವಿತರಿಸಲಾಗುತ್ತದೆ ಎಂದು ಯೋಜನೆ ಅಧಿಕಾರಿ ಡಾ.ಎಂ.ಎನ್.ನಂದಿತಾ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಬಿಪಿಎಲ್ ಕಾರ್ಡ್ ಮತ್ತು ಆಧಾರ್‌ ಕಾರ್ಡ್‌ನೊಂದಿಗೆ ಆಗಮಿಸಿ ಕಾರ್ಡ್ ಪಡೆಯಬೇಕು. ಅರ್ಹ ಫಲಾನುಭವಿಗಳು ಬಿಪಿಎಲ್, ಎಪಿಎಲ್ ಪಡಿತರ ಚೀಟಿ ಜೊತೆಗೆ ಆಧಾರ್‌ ಕಾರ್ಡ್ ತರಬೇಕು ಎಂದರು.

ಎಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಶೇ 30 ರಷ್ಟು ವೆಚ್ಚ ಭರಿಸುತ್ತದೆ. ಸ್ಥಳದಲ್ಲಿಯೇ ಕಾರ್ಡಗಳನ್ನು ಸಿದ್ದಪಡಿಸಿ ನೀಡಲಾಗುತ್ತದೆ. ಇನ್ನು ಮುಂದೆ ಪಂಚಾಯ್ತಿ ಕೇಂದ್ರದಲ್ಲಿ ನಿರಂತರವಾಗಿ ನೀಡುವುದರಿಂದ ಸಾರ್ವಜನಿಕರು ಆತಂಕ ಪಡಬೇಕಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಮೊದಲ ಚಿಕಿತ್ಸೆ ನೀಡಿ ಚಿಕಿತ್ಸಾ ವ್ಯವಸ್ಥೆ ಇಲ್ಲದೇ ಇದ್ದಲ್ಲಿ ಮಾತ್ರ ನೋಂದಾಯಿಸಿಕೊಂಡ ಖಾಸಗಿ ಆಸ್ಪತ್ರೆಗಳಿಗೆ ರೋಗಿಯನ್ನು ಕಳುಹಿಸಲಾಗುತ್ತದೆ ಎಂದರು.

ಅನುಷ್ಠಾನ ಅಧಿಕಾರಿ ಡಾ.ಗಣೇಶ, ನಾಗರಾಜ ಜಗತಾಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT