ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು: ಕೊಳೆತ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆ

Published 8 ಜನವರಿ 2024, 14:09 IST
Last Updated 8 ಜನವರಿ 2024, 14:09 IST
ಅಕ್ಷರ ಗಾತ್ರ

ಸಿಂಧನೂರು: ನಗರದ ಹೊರವಲಯದಲ್ಲಿ 6 ರಿಂದ 8 ವರ್ಷದ ಹೆಣ್ಣು ಮಗುವಿನ ಶವ ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ. ಮಗುವಿನ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾಲಕಿಯ ಶವ ಮೇಲ್ನೋಟಕ್ಕೆ ಕೊಳೆತಂತೆ ಕಾಣುತ್ತಿದೆ. ಆದರೆ, ಅಕ್ಕ–ಪಕ್ಕದವರು ಮಗುವಿನ ಕೊಲೆಯಾಗಿರಬಹುದು ಎಂದು ಶಂಕಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಇನ್‌ಸ್ಪೆಕ್ಟರ್‌ ದುರುಗಪ್ಪ ಡೊಳ್ಳಿನ್, ‘ಶವ ಕೊಳೆತಂತೆ ಆಗಿದೆ. ಮಗುವಿನ ನಿಖರ ಗುರುತು ಪತ್ತೆಯಾಗಿಲ್ಲ. ಈ ಕುರಿತು ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಮುಂದಿನ ತನಿಖೆ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT