ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಕ್ರೀದ್‌: ಸಾರ್ವಜನಿಕ ಶಾಂತಿ ಸಭೆ

Published 16 ಜೂನ್ 2024, 16:07 IST
Last Updated 16 ಜೂನ್ 2024, 16:07 IST
ಅಕ್ಷರ ಗಾತ್ರ

ಕವಿತಾಳ: ‘ಬಕ್ರೀದ್ ಹಬ್ಬವನ್ನು ಶಾಂತಿಯಿಂದ ಆಚರಿಸಬೇಕು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು’ ಎಂದು ಅಪರಾಧ ವಿಭಾಗದ ಸಬ್‌ ಇನ್‌ಸ್ಪೆಕ್ಟರ್‌ ಪಂಪಾಪತಿ ಹೇಳಿದರು.

ಬಕ್ರೀದ್‌ ಹಬ್ಬದ ಅಂಗವಾಗಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಸಬ್‌ಇನ್‌ಸ್ಪೆಕ್ಟರ್‌ ವೆಂಕಟೇಶ ನಾಯಕ ಮಾತನಾಡಿ,‘ಸಾಮಾಜಿಕ ಜಾಲ ತಾಣಗಳಲ್ಲಿ ಮಾಹಿತಿ ಹರಿ ಬಿಡುವ ಮುಂಚೆ ಯೋಚಿಸಬೇಕು. ಯಾವುದೇ ರೀತಿಯ ಸುಳ್ಳು ಮಾಹಿತಿ ಹರಡುವುದರಿಂದ ಸಮಾಜದಲ್ಲಿ ಶಾಂತಿ ಕದಡುತ್ತದೆ, ಅದಕ್ಕೆ ಅವಕಾಶ ನೀಡಬಾರದು’ ಎಂದರು.

ಈ ಸಂದರ್ಭದಲ್ಲಿ ಶಶಿಧರ ಜಂಗಮರಹಳ್ಳಿ, ಆಜಂಪಾಶಾ ಧಣಿ, ಚಂದ್ರು, ಭೀಮಣ್ಣ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT