ಶುಕ್ರವಾರ, ಸೆಪ್ಟೆಂಬರ್ 17, 2021
24 °C
ವಿವಿಧ ಬ್ಯಾಂಕ್‌ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಸಲಹೆ

ರೈತರಿಗೆ ಸಕಾಲದಲ್ಲಿ ಸಾಲಸೌಲಭ್ಯ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿತ ರೈತರಿಗೆ ಸಕಾಲದಲ್ಲಿ ಸಾಲಸೌಲಭ್ಯ ನೀಡುವುದಕ್ಕೆ ಅಡ್ಡಿಯಾಗುವ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ವಿವಿಧ ಬ್ಯಾಂಕ್‌ ಶಾಖೆಗಳ ವ್ಯವಸ್ಥಾಪಕರಿಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲೆಯ ವಿವಿಧ ಬ್ಯಾಂಕ್ ಶಾಖೆಗಳ ವ್ಯವಸ್ಥಾಪಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರು ಸಾಲ ಸೌಲಭ್ಯಗಾಗಿ ಬ್ಯಾಂಕ್‌ಗಳ ಮುಂದೆ ಅರ್ಜಿ ಹಿಡಿದು ಓಡಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಇ- ಬ್ಯಾಂಕಿಂಗ್‌ ವ್ಯವಸ್ಥೆ ಕಲ್ಪಿಸಿದೆ. ರೈತರಿಗೆ ಸಾಲಸೌಲಭ್ಯ ಬೇಕಾದ ತಂತ್ರಾಂಶ, ಡಿಎಸ್ ಕೀ, ಬ್ಯಾಂಕ್ ಅಕೌಂಟ್, ಡಿಜಿಟಲ್ ಸಹಿ, ಆಧಾರ್ ಸಂಖ್ಯೆ ಲಿಂಕ್ ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈಗಾಗಲೇ ಬ್ಯಾಂಕ್ ಅಧಿಕಾರಿಗಳಿಗೆ ತರಬೇತಿ ನೀಡಿದ್ದು, ಅಗತ್ಯವಾದರೆ ಎರಡನೇ ತರಬೇತಿಗೆ ಅವಕಾಶ ಕಲ್ಪಿಸಲಾಗುವುದು. ಬ್ಯಾಂಕ್‌ಗಳ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು. ಬ್ಯಾಂಕ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಬೇಕು. ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಆಧಾರಿತ ಪ್ಲೇಟ್ ಲೋಟ, ತಟ್ಟೆ ಬಳಸದೆ ಪರಿಸರ ಸ್ನೇಹಿ ಪ್ಲೇಟ್ ಲೋಟ ಹಾಗೂ ಬ್ಯಾನರ್ ಬಳಕೆ ಮಾಡುವಂತೆ ಹೇಳಿದರು.

ಉಪನೋಂದಣಾಧಿಕಾರಿ ಲಕ್ಷ್ಮಿ ತುಳಸಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಾಬು ಬಳಗಾನೂರ್, ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರಾದ ಅಶೋಕ್ ಕುಮಾರ್, ಸತ್ಯನಾರಾಯಣ, ರವಿ, ಗುರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.