ಸಿಂಧನೂರು: ‘ಎಲ್ಲರನ್ನೂ ಒಗ್ಗೂಡಿಸಿಕೊಂಡು ರಾಜ್ಯದಲ್ಲಿ ನಾಯಕನಾಗಿ ಹೊರಹೊಮ್ಮಿರುವ ವಿಧಾನಪರಿಷತ್ ಶಾಸಕ ಬಸನಗೌಡ ಬಾದರ್ಲಿ ಅವರಿಗೆ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡಬೇಕು’ ಎಂದು ಮಾದಿಗ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಶ ಗಿರಿಜಾಲಿ ಆಗ್ರಹಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಬಸನಗೌಡ ಅವರು ಸಾಮಾಜಿಕ ಕಳಕಳಿಯುಳ್ಳ ಸಂಘಟನಾ ಚತುರ, ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಪಕ್ಷಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ, ಪಕ್ಷ ಬಲವರ್ಧನೆಗೆ ಶ್ರಮಿಸಿದ್ದಾರೆ. 2021ರಲ್ಲಿ ಮಸ್ಕಿ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದರು. ಸಿಂಧನೂರು ಕ್ಷೇತ್ರದ ಚಿತ್ರಣ ಬದಲಾಯಿಸುವ ಕನಸು ಕಾಣುತ್ತಿರುವ ನಾಯಕನಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಚಿವ ಸ್ಥಾನಮಾನ ನೀಡಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಹನುಮೇಶ ಕರ್ನಿ ಮಾತನಾಡಿ, ‘ಬಸನಗೌಡ ಅವರಿಗೆ ವಿಧಾನಸಭೆ ಮತ್ತು ಲೋಕಸಭೆ ಟಿಕೆಟ್ ತಪ್ಪಿತು. ಮಾದಿಗ ಸಮಾಜದ ಹಿರಿಯ ಮುಖಂಡ ಯಮನಪ್ಪ ಹೇಳಿದ ಮಾತಿನಲ್ಲಿ ಹುರುಳಿಲ್ಲ. ಅವರು ತಮ್ಮ ಮಾತನ್ನು ಹಿಂತೆಗೆದುಕೊಳ್ಳಬೇಕು. ಯುವ ಕಾಂಗ್ರೆಸ್ನ ರಾಜ್ಯಾಧ್ಯಕ್ಷರಾಗಿ ಮುಂಚೂಣಿ ಘಟಕದಲ್ಲಿ ಕೆಲಸ ಮಾಡಿದವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡುವುದು ವಾಡಿಕೆ. ಈ ದೃಷ್ಟಿಯಲ್ಲಿ ಅವರಿಗೆ ಈಗಾಗಲೇ ಎರಡು ಬಾರಿ ಟಿಕೆಟ್ ಕೈತಪ್ಪಿದೆ. ಇದನ್ನು ಗಮನಿಸಿದ ಹೈಕಮಾಂಡ್ ಅವರನ್ನು ವಿಧಾನ ಪರಿಷತ್ ಶಾಸಕರನ್ನಾಗಿ ಮಾಡಿದೆ. ನಿನ್ನೆ, ಮೊನ್ನೆ, ಬಂದವರು ಎಂದು ಹೇಳಿ ಯಮನಪ್ಪನವರು ದಾರಿ ತಪ್ಪಿಸುವ ಕೆಲಸ ಮಾಡಬಾರದು’ ಎಂದು ಪ್ರತಿಕ್ರಿಯಿಸಿದರು.

ಅಶೋಕ ಗೊರೇಬಾಳ, ಪಾಮೇಶ ಹೊಸಳ್ಳಿ ಕ್ಯಾಂಪ್, ಮಂಜುನಾಥ ಗೊರೇಬಾಳ, ಸಣ್ಣ ಹುಸೇನಪ್ಪ, ಯೇಸುರಾಜ, ಹನುಮೇಶ ಗೀತಾ ಕ್ಯಾಂಪ್, ಮಂಜುನಾಥ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-32-1986261650

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.