ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಡಳಿತದಿಂದ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ

Last Updated 3 ಮೇ 2022, 10:38 IST
ಅಕ್ಷರ ಗಾತ್ರ

ರಾಯಚೂರು: ಜನರು ತಮ್ಮತಮ್ಮ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ಖಂಡಿತವಾಗಿ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ನಾನು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ದಿನದಿಂದಲೂ ಇಲ್ಲಿಯವರೆಗೂ ರಾಯಚೂರಿನಲ್ಲಿ ಸೌಹಾರ್ದತೆಯಿಂದ ಜನರು ಜೀವನ ಮಾಡುತ್ತಿರುವುದು ನೋಡಿ ಸಂತೋಷವಾಗಿದೆ’ ಎಂದರು.

ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿ, ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಿದಾಗ ಮಾತ್ರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ. ರಾಯಚೂರಿನಲ್ಲಿ ಯಾವುದೇ ಉಪ ಪಂಗಡಗಳನ್ನು ಮಾಡದೇ ಒಗ್ಗಟ್ಟಿನಿಂದ ಜಯಂತಿ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಉಪನ್ಯಾಸಗಿ ಪ್ರೊ. ಸಿದ್ಧು ಯಾಪಲಪರವಿ ಮಾತನಾಡಿ, ಜಗಜ್ಯೋತಿ ಬಸವಣ್ಣ, 12ನೇ ಶತಮಾನದಲ್ಲಿಯೇ ಅನುಭವ ಮಂಟಪದಡಿ ಎಲ್ಲ ಜಾತಿ, ವರ್ಗದ ಜನರನ್ನು ಒಂದುಗೂಡಿಸಿ ಸಮಾನತೆಯ ಮೂಲಕ ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದ ಯುಗ ಪುರುಷ. ಅವರ ವಚನಗಳ ಮೂಲಕ ಸಾಮಾಜಿಕ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದ ಮಹಾನ್ ದಾರ್ಶನಿಕ. ಅವರ ತತ್ವ ಸಿದ್ಧಾಂತಗಳನ್ನು 12ನೇ ಶತಮಾನದಲ್ಲಿಯೇ ಅನುಷ್ಠಾನಗೊಳಿಸಿದರೆ, ದೇಶದಲ್ಲಿ ಜಾತಿ, ಬೇಧ, ಅಸಮಾನತೆ, ಗಂಡು, ಹೆಣ್ಣು ಎಂಬ ತಾರತ್ಯಮವೇ ಇರುತ್ತಿರಲಿಲ್ಲ ಎಂದು ಹೇಳಿದರು.

ಸತ್ಯ ಮಾರ್ಗದಲ್ಲಿ ನಡೆದರೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿ ಬರುತ್ತದೆ ಎಂಬುದನ್ನು ಬಸವಣ್ಣನ ವಚನಗಳ ಮೂಲಕ ಮನದಟ್ಟು ಮಾಡಿಕೊಳ್ಳಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್‌.ದುರುಗೇಶ,ಚಿಕ್ಕಸೂಗೂರಿನ ಚೌಕಿಮಠದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿದರು.

ಸಮಾರಂಭ ಪೂರ್ವ ಜಗಜ್ಯೋತಿ ಬಸವೇಶ್ವರ ಭಾವಚಿತ್ರ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ವಿ.ನಾಯಕ, ವೀರಶೈವ ಸಮಾಜದ ಜಿಲ್ಲಾಧ್ಯಕ್ದ ಎಂ.ವೀರನಗೌಡ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT