ಮೂಲ ಸೌಕರ್ಯ ಒದಗಿಸಲು ಒತ್ತಾಯ

7
ಅಂಬೇಡ್ಕರ್ ವಸತಿ ನಿಲಯ ವಿದ್ಯಾರ್ಥಿಗಳ ಪ್ರತಿಭಟನೆ

ಮೂಲ ಸೌಕರ್ಯ ಒದಗಿಸಲು ಒತ್ತಾಯ

Published:
Updated:
Deccan Herald

ರಾಯಚೂರು: ನಗರದ ಡಾ.ಬಿ.ಆರ್‌. ಅಂಬೇಡ್ಕರ್ ವಸತಿ ನಿಲಯಕ್ಕೆ ಮೂಲಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವಸತಿ ನಿಲಯದ ಎದುರಿಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಮೂಲಸೌಕರ್ಯ ಒದಗಿಸಲು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದರು.

ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದ ವಸತಿ ನಿಲಯದ ಪಾಲಕರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬೇಕು ಎಂದು ಆಗ್ರಹಿಸಿದರು.

ಕುಡಿಯಲು ಯೋಗ್ಯವಾದ ನೀರನ್ನು ಒದಗಿಸಬೇಕು. ವಿದ್ಯುತ್ ದೀಪ, ಫ್ಯಾನ್ ಹಾಗೂ ಗ್ರಂಥಾಲಯ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳ ಹಾಜರಾತಿಗೆ ಸಂಬಂಧಿಸಿದ ಬಯೋಮೆಟ್ರಿಕ್ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಎಫ್‌ಐ ಜಿಲ್ಲಾ ಸಮಿತಿ ಅಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ರವಿ, ಶಿವಮೂರ್ತಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !