ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ: ಜಗದೀಶ ಗಂಗಣ್ಣನವರ್‌

Published 22 ಮಾರ್ಚ್ 2024, 15:13 IST
Last Updated 22 ಮಾರ್ಚ್ 2024, 15:13 IST
ಅಕ್ಷರ ಗಾತ್ರ

ಮಸ್ಕಿ: ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್‌ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮತಗಟ್ಟೆಯ ಬೂತ್‌ ಕೇಂದ್ರಗಳಲ್ಲಿ ಇರುವ ಬ್ಯಾನರ್‌ ಹಾಗೂ ಚಿತ್ರಗಳನ್ನು ತೆರವುಗೊಳಿಸಬೇಕು. ಅಧಿಕಾರಿಗಳು ಯಾವುದೇ ರಾಜಕೀಯ ಪಕ್ಷಗಳ ಮುಖಂಡರಿಗೆ ಸಹಕರಿಸಬಾರದು. ಸಾಮಾಜಿಕ ಜಾಲಾತಾಣಗಳಲ್ಲಿ ರಾಜಕೀಯ ಮುಖಂಡರೊಂದಿಗೆ ತಮ್ಮ ಭಾವಚಿತ್ರ ಇರುವ ಚಿತ್ರ ಕಂದು ಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ತಹಶೀಲ್ದಾರ್ ಸುಧಾ ಅರಮನೆ, ತಹಶೀಲ್ದಾರ್, ತಹಶೀಲ್ದಾರ್ (ಗ್ರೇಡ್ _2) ರಾಘವೇಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ, ಪಂಪನಗೌಡ, ಶಿವಾನಂದರಡ್ಡಿ, ಗಂಗಾಧರ ಮೂರ್ತಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಚೆಕ್‌ ಪೋಸ್ಟ್‌ ಪರಿಶೀಲನೆ: ತಾಲ್ಲೂಕಿನ ಗಡಿಭಾಗ ಉಮಲೂಟಿ ಬಳಿ ಹಾಕಿರುವ ಚೆಕ್‌ ಪೋಸ್ಟ್‌ನ್ನು ಸಹಾಯಕ ಚುನಾವಣಾಧಿಕಾರಿ ಜಗದೀಶ ಪರಿಶೀಲಿಸಿದರು.

’ಈ ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಹಣ ಮತ್ತು ಮದ್ಯ ಸಾಗಾಟ ಕಂಡು ಬಂದರೆ ಕೂಡಲೇ ಜಪ್ತಿ ಮಾಡಬೇಕು ಎಂದು ಸೂಚಿಸಿದರು.

ಭದ್ರತೆಗಾಗಿ ಚೆಕ್‌ ಪೋಸ್ಟ್‌ ಬಳಿ ಹೆಚ್ಚಿನ ಪೊಲೀಸ್‌ ಹಾಗೂ ಅರೆ ಸೇನಾ ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದರು.

ಮಸ್ಕಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ ಮಾತನಾಡಿದರು.
ಮಸ್ಕಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT