ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಚಿವರಿಗಾಗಿ ಕಾದು ಕುಳಿತ ಫಲಾನುಭವಿಗಳು

Last Updated 13 ಮಾರ್ಚ್ 2023, 6:48 IST
ಅಕ್ಷರ ಗಾತ್ರ

ರಾಯಚೂರು: ಇಲ್ಲಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಫಲಾನುಭವಿಗಳ ಸಮ್ಮೇಳನ ಆಯೋಜಿಸಲಾಗಿದ್ದು, ಮಧ್ಯಾಹ್ನ 12.30 ಕ್ಕೆ ಆರಂಭವಾಗಲಿದೆ.

ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಫಲಾನುಭವಿಗಳನ್ನು ಬೆಳಿಗ್ಗೆ 10 ಕ್ಕೆ ಕರೆತಂದಿದ್ದಾರೆ. ಐದು ಸಾವಿರಕ್ಕಿಂತ ಹೆಚ್ಚು ಫಲಾನುಭವಿಗಳು ಸಚಿವರ ಆಗಮನಕ್ಕಾಗಿ ಕುಳಿತಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತ ಸಬಲೀಕರಣ ರಾಜ್ಯ ಸಚಿವ ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಬರಲಿದ್ದಾರೆ. ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT