ಕೋವಿಡ್ ಸಮಯದಲ್ಲಿ ಯರಮರಸ್ ಕ್ಯಾಂಪ್‌ನ ಅಫತಾಬ್ ಶಿಕ್ಷಣ ಸಂಸ್ಥೆಯ ಅಫತಾಬ್ ಫಂಕ್ಷನ್ ಹಾಲ್‌ನಲ್ಲಿ ವಠಾರ ಶಾಲೆ ಮಾಡಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ. ಪ್ರತಿವರ್ಷ ಗೈರಾದ ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ ನೀಡಿ ಅವರನ್ನು ಪುನಃ ಶಾಲೆಗೆ ಕರೆ ತರುವ ಕೆಲಸ ಮಾಡುತ್ತಾರೆ. ದಾಖಲಾತಿ ಅಭಿಯಾನದ ಮೂಲಕ ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸಿದ್ದಾರೆ. ಶಿಲ್ಪಾ ಕಂಪನಿಯ ಸಹಕಾರದಿಂದ ಸಿಎಸ್‌ಆರ್ ಅನುದಾನದಲ್ಲಿ ಶಾಲೆಗೆ ಬೆಂಚ್‌ಗಳ ವ್ಯವಸ್ಥೆ ಮಾಡಲಾಗಿದೆ. ಅರಣ್ಯ ಇಲಾಖೆಯ ಸಹಕಾರದಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟಿದ್ದಾರೆ. ಮಕ್ಕಳಿಗೆ ಸುಲಭವಾಗಿ ಇಂಗ್ಲಿಷ್ ಭಾಷೆ ಕಲಿಕೆ, ಭಾಷಣ, ರಾಷ್ಟ್ರೀಯ ಭಾವೈಕ್ಯದ ಕುರಿತು ಮಕ್ಕಳಿಗೆ ಬೋಧಿಸುತ್ತಾರೆ. ನಾಟಕ, ಭಾಷಣಗಳ ಮೂಲಕ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನರಿಗೆ ಮತ್ತು ಮಕ್ಕಳಿಗೆ ಅರಿವು ಮೂಡಿಸಿದ್ದಾರೆ.