ದೇವದುರ್ಗ: ದೇವದುರ್ಗ ಮತ್ತು ಅರಕೇರಾ ತಾಲ್ಲೂಕಿನ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ‘ಕೊಪ್ಪರ ಗ್ರಾಮ ಪಂಚಾಯಿತಿಯ ಹೇಮನಾಳ, ಚಿಂಚೋಡಿ ಗ್ರಾಮ ಪಂಚಾಯಿತಿಯ ಅಗಸರದೊಡ್ಡಿಯಿಂದ ವೀರಗೋಟವರೆಗೆ ಪೈಪ್ಲೈನ್ ಅಳವಡಿಸಬೇಕು. ಜೆಸ್ಕಾಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು’ ಎಂದರು.

ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಇಒ ಬಸವರಾಜ ಹಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಹೀರಾಲಾಲ, ಪುರಸಭೆ ಮುಖ್ಯಾಧಿಕಾರಿ ಹಂಪಯ್ಯ ಕೆ ಮತ್ತು ಪಿಡಿಒಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.